HomeKarnatakaBIG NEWS : ರಾಜ್ಯದ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : ಜನವರಿಯಿಂದ ಶಾಲೆಗಳಿಗೆ ‘ನ್ಯಾಪ್ ಕಿನ್’...

BIG NEWS : ರಾಜ್ಯದ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ : ಜನವರಿಯಿಂದ ಶಾಲೆಗಳಿಗೆ ‘ನ್ಯಾಪ್ ಕಿನ್’ ವಿತರಣೆ

ಬೆಳಗಾವಿ : ಕಳೆದ 4 ವರ್ಷಗಳಿಂದ ಸ್ಥಗಿತವಾಗಿದ್ದ ಶುಚಿ ಯೋಜನೆಗೆ ರಾಜ್ಯ ಸರ್ಕಾರ ಮರು ಚಾಲನೆ ನೀಡುತ್ತಿದ್ದು, ಜನವರಿಯಿಂದ ಶಾಲೆಯ ಹೆಣ್ಣುಮಕ್ಕಳಿಗೆ ನ್ಯಾಪ್ಕಿನ್ ವಿತರಿಸಲು ಸರ್ಕಾರ ನಿರ್ಧರಿಸಿದೆ.

ಕೆಲವು ಹೆಣ್ಣು ಮಕ್ಕಳು ಸ್ಯಾನಿಟರಿ ನ್ಯಾಪ್ಕಿನ್ ಬದಲಿಗೆ ಬಟ್ಟೆಗಳನ್ನು ಬಳಸುತ್ತಿದ್ದಾರೆ. ಇದು ಚರ್ಮ ರೋಗಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ಕೂಡಲೇ ಸ್ಯಾನಿಟರಿ ನ್ಯಾಪ್ಕಿನ್ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಪರಿಷತ್ ಜೆಡಿಎಸ್ ಸದಸ್ಯ ತಿಪ್ಪೇಸ್ವಾಮಿ ಆಗ್ರಹಿಸಿದ್ದರು.

ಮಹಿಳೆಯರ ಮುಟ್ಟಿನ ಸಮಸ್ಯೆ ಹಾಗೂ ಶುಚಿತ್ವದ ಬಗ್ಗೆ ಜೆಡಿಎಸ್ ಸದಸ್ಯ ತಿಪ್ಪೇಸ್ವಾಮಿ ಮಾಡಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ‘ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು ಜನವರಿಯಿಂದ ಶಾಲೆ ಹೆಣ್ಣುಮಕ್ಕಳಿಗೆ ನ್ಯಾಪ್ಕಿನ್ ವಿತರಣೆ ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೊದಲು ಸರ್ಕಾರಿ ಆಸ್ಪತ್ರೆಯ ಮೂಲಕ ನ್ಯಾಪ್ಕಿನ್ ಗಳನ್ನ ವಿತರಿಸಲಾಗುತ್ತಿತ್ತು. ಈ ಬಾರಿ ನೇರವಾಗಿ ಶಾಲೆಗೆ ತೆರಳಿ ವಿದ್ಯಾರ್ಥಿನಿಯರಿಗೆ ನ್ಯಾಪ್ಕನ್ ಗಳನ್ನ ವಿತರಿಸುವಂತೆ ಏಜನ್ಸಿಯವರಿಗೆ ಸೂಚನೆ ನೀಡಲಾಗಿದೆ , 10 ವರ್ಷದಿಂದ 18 ವರ್ಷದ ಒಳಗಿನ ಸುಮಾರು 19 ಲಕ್ಷ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಿಸಲಾಗುತ್ತಿದೆ. ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್ ಮಕ್ಕಳಿಗು ನ್ಯಾಪ್ಕಿನ್ ಗಳನ್ನ ವಿತರಿಸಲಾಗುವುದು. ಮುಟ್ಟಿನ ಕಪ್ಗಳನ್ನು ವಿತರಣೆ ಮಾಡುವ ಕಾರ್ಯಕ್ರಮವನ್ನು ಈಗಾಗಲೇ ಮಾಡುತ್ತಿದ್ದೇವೆ. ಇದರ ಬಗ್ಗೆ ಇನ್ನೂ ಜಾಗೃತಿ ಮೂಡಿಸಬೇಕಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular