ಬೆಂಗಳೂರು : ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಸಣ್ಣ ಹಾಗೂ ಅತೀ ಸಣ್ಣ ರೈತರಿಗೆ ಬೋರ್ವೆಲ್ ಕೊರೆದು, ಪಂಪ್ ಮೋಟಾರ್ ಹಾಗೂ ವಿದ್ಯುದೀಕರಣ ಮಾಡಿ ನೀರನ್ನು ಒದಗಿಸಲಾಗುತ್ತದೆ.
ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಸರ್ಕಾರವು ರೂ. 4.00 ಲಕ್ಷಗಳನ್ನು 1. ಬೆಂಗಳೂರು ಗ್ರಾಮಾಂತರ 2. ಕೋಲಾರ 3. ಚಿಕ್ಕಬಳ್ಳಾಪುರ 4. ರಾಮನಗರ 5. ತುಮಕೂರು. ಜಿಲ್ಲೆಗಳಿಗೆ ನಿಗದಿಪಡಿಸಿದ್ದು ಮತ್ತು ಇತರೆ ಜಿಲ್ಲೆಗಳಿಗೆ ರೂ. 3.00 ಲಕ್ಷಗಳನ್ನು ನಿಗದಿಪಡಿಸಿರುತ್ತದೆ. ಅರ್ಜಿದಾರರು ಈ ಮೊತ್ತದಲ್ಲಿ ಕೊಳವೆ ಬಾವಿ ಕೊರೆಯುವಿಕೆ, ಪಂಪು ಮೋಟಾರು ಸರಬರಾಜು ಮತ್ತು ವಿದ್ಯುದೀಕರಣ ಮಾಡಿಕೊಡಲಾಗುತ್ತದೆ. ಠೇವಣಿ ಹಣ ರೂ. 75,000/-ವನ್ನು ನಿಗಮದಿಂದ ನೇರವಾಗಿ ಸಂಬಂಧಪಟ್ಟ ESCOM ಗಳಿಗೆ ಪಾವತಿಸಲಾಗುವುದು.
ಅರ್ಹತೆ
ಅರ್ಜಿದಾರರು ಕರ್ನಾಟಕ ರಾಜ್ಯದ ಕಾಯಂ ನಿವಾಸಿಯಾಗಿರಬೇಕು.
ಅರ್ಜಿದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರಾಗಿರಬೇಕು.
ಪ್ರತಿ ಫಲಾನುಭವಿಗೆ 1 ಎಕರೆ 20 ಗುಂಟೆ (1 ಎಕರೆ 50 ಸೆಂಟ್ಸ್) ಎಕರೆಯಿಂದ 5 ಎಕರೆಯವರೆಗೆ ಕೃಷಿ ಜಮೀನಿರಬೇಕು.
ಕೊಡಗು, ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಇಂತಹ ಜಿಲ್ಲೆಗಳಲ್ಲಿ ಜಮೀನಿನ ಲಭ್ಯತೆ ಬಹಳ ಕಡಿಮೆ ಇರುವುದರಿಂದ ಕನಿಷ್ಠ 1 ಎಕರೆ ಜಮೀನನ್ನು ಹೊಂದಿರತಕ್ಕದ್ದು.
ಅರ್ಜಿದಾರರು ಸಣ್ಣ / ಅತೀಸಣ್ಣ ಹಿಡುವಳಿದಾರ ರೈತರಾಗಿರಬೇಕು.
ಗ್ರಾಮೀಣ ಪ್ರದೇಶಗಳಲ್ಲಿ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ರೂ. 6.00 ಲಕ್ಷಗಳನ್ನು ಮೀರಿರಬಾರದು.
ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಇರಬೇಕು.
ಸಲ್ಲಿಸಬೇಕಾದ ದಾಖಲೆಗಳು:
ಫಲಾನುಭವಿಯ ಆನ್ಲೈನ್ ಅರ್ಜಿ ಹಾಗೂ ಪಾಸ್ಪೋರ್ಟ್ ಅಳತೆಯ ಪೋಟೋ
ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಮತ್ತು ಮತ್ತು ಅಲ್ಪಸಂಖ್ಯಾತರ ಪ್ರಮಾಣಪತ್ರ.
ಆಧಾರ್ ಕಾರ್ಡ್ ಪ್ರತಿ (ವಿಳಾಸದ ಪುರಾವೆ).
ಜಮೀನಿಗೆ ಸಂಬಂಧಿಸಿದ ಇತ್ತೀಚಿನ ಆರ್.ಟಿ.ಸಿ.ಪ್ರತಿ.
5ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಸಣ್ಣ/ಅತಿಸಣ್ಣ ಹಿಡುವಳಿದಾರರ
ಭೂ-ಕಂದಾಯ ಪಾವತಿಸಿದ ರಸೀದಿ
ಸ್ವಯಂಘೋಷಣೆ ಪತ್ರ.
ಹೆಚ್ಚಿನ ವಿವರಗಳಿಗೆ ನಿಗಮದ ವೆಬ್ಸೈಟ್ಗೆ /KMDC ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಭೇಟಿ ಕೊಡಿ
ವಿ.ಸೂ: KMDC ಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳಂತೆ ಈ

