HomeKarnatakaGOOD NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಸಾರಿಗೆ ಇಲಾಖೆಯಲ್ಲಿ 9 ಸಾವಿರ...

GOOD NEWS : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ ಸಾರಿಗೆ ಇಲಾಖೆಯಲ್ಲಿ 9 ಸಾವಿರ ‘ಸಿಬ್ಬಂದಿ’ ಗಳ ನೇಮಕಾತಿ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಗುಡ್ ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ಸಾರಿಗೆ ಇಲಾಖೆಯಲ್ಲಿ 9 ಸಾವಿರ’ ಸಿಬ್ಬಂದಿ’ ಗಳ ನೇಮಕಾತಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವ ರಾಮಲಿಂಗಾ ರೆಡ್ಡಿ ಶಕ್ತಿ ಯೋಜನೆಯಿಂದ ನಮ್ಮ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರಲ್ಲಿ 15-20 ಲಕ್ಷ ಜನರ ಸಂಖ್ಯೆ ಹೆಚ್ಚಾಗಿದೆ. 4 ವರ್ಷ ಸತತವಾಗಿ ಬಸ್ ಖರೀದಿ ಮಾಡಿಲ್ಲ.2016ರ ನಂತರ ಸಿಬ್ಬಂದಿ ನೇಮಕಾತಿಯೂ ಆಗಲಿಲ್ಲ. ಈಗ 9 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಫೆಬ್ರವರಿ ಕೊನೆ ವೇಳೆಗೆ 5,500 ಬಸ್ಗಳು ಬರಲಿವೆ. 2016ರ ನ೦ತರ ಸಿಬ್ಬಂದಿ ನೇಮಕಾತಿ ಆಗಿರಲಿಲ್ಲ. ಈಗ 9 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರಿಗೆ ಇಲಾಖೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ 49 ಮೃತಾವಲಂಬಿತರಿಗೆ ಕ.ರಾ.ಸಾ ಪೇದೆ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದ್ದು, ದಿನಾಂಕ : 13-12-2023 ರಂದು ಸುವರ್ಣಸೌಧದಲ್ಲಿ ಸಾಂಕೇತಿಕವಾಗಿ 10 ಜನ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ವಿತರಿಸಲಾಗಿದೆ. ಈ ಸಂದರ್ಭಲ್ಲಿ ವಾ.ಕ.ರ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಭರತ್.ಎಸ್, ಭಾಆಸೇ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular