HomeKarnatakaಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ನಗದುರಹಿತ ವೈದ್ಯಕೀಯ ಚಿಕಿತ್ಸೆಗೆ 'ಆರೋಗ್ಯ ಸಂಜೀವಿನಿ' ಅನುಷ್ಠಾನಕ್ಕೆ ಸಮಿತಿ...

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ನಗದುರಹಿತ ವೈದ್ಯಕೀಯ ಚಿಕಿತ್ಸೆಗೆ ‘ಆರೋಗ್ಯ ಸಂಜೀವಿನಿ’ ಅನುಷ್ಠಾನಕ್ಕೆ ಸಮಿತಿ ರಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು THE KARNATAKA AROGYA SANJEEVINI SCHEME KASS ಅನುಷ್ಠಾನಗೊಳಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ.

ಒಳಪಡುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್(SAST) ಮುಖಾಂತರ ಆರೋಗ್ಯ ಸಂಜೀವಿನಿ ಅನುಷ್ಠಾನಗೊಳಿಸಲು ಸರ್ಕಾರವು ನಿರ್ಧರಿಸಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ.

ಯೋಜನೆಯ ನಿರ್ವಹಣೆಗಾಗಿ ವಿವಿಧ ಸಮಿತಿಗಳ ರಚನೆ ಹಾಗೂ ಅವುಗಳ ಅಧಿಕಾರ ಮತ್ತು ನಿರ್ವಹಿಸಬೇಕಾದ ವಿಷಯಗಳ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸುವುದಾಗಿ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KARNATAKA AROGYA SANJEEVINI SCHEME – KASS) ಯನ್ನು ಸುಗುಮವಾಗಿ, ಪರಿಣಾಮಕಾರಿಯಾಗಿ ಹಾಗೂ ಸುವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ವಿವಿಧ ಸಮಿತಿಗಳನ್ನು ಅವುಗಳ ಸಂಯೋಜನೆ ಹಾಗೂ ಜವಾಬ್ದಾರಿಗಳನ್ನು ನಿಗದಿಪಡಿಸಿ ಆದೇಶಿಸಬೇಕಾಗಿರುವುದರಿಂದ ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರು ಸರ್ಕಾರಕ್ಕೆ ಸಲ್ಲಿಸಿರುವ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿದಂತೆ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಲು ರೂಪಿಸಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ-(KASS) ಯನ್ನು ಪರಿಣಾಮಕಾರಿ ಹಾಗೂ ಸುವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಸರ್ಕಾರವು ಈ ಕೆಳಕಂಡ ವಿವಿಧ ಸಮಿತಿಗಳನ್ನು ರಚಿಸಿ ಆದೇಶಿಸಿದೆ:

KASS ಉನ್ನತ ಮಟ್ಟದ ಕಾರ್ಯ ನೀತಿ ಸಮಿತಿ

KASS ತಜ್ಞರ ಸಲಹಾ ಸಮಿತಿ

ರಾಜ್ಯ ಮಟ್ಟದ KASS ನೋಂದಾವಣೆ, ಶಿಸ್ತು ಮತ್ತು ಕುಂದು ಕೊರತೆಗಳ ನಿವಾರಣಾ ಸಮಿತಿ

ಜಿಲ್ಲಾಮಟ್ಟದ KASS ನೋಂದಾವಣೆ, ಶಿಸ್ತು ಮತ್ತು ಕುಂದು ಕೊರತೆಗಳ ನಿವಾರಣಾ ಸಮಿತಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular