HomeLatest NewsGOOD NEWS: ಆಂಜಿಯೋಗ್ರಾಮ್ ಚಿಕಿತ್ಸೆ ಉಚಿತವಾಗಿ ನೀಡಲು ಸರ್ಕಾರ ಆದೇಶ

GOOD NEWS: ಆಂಜಿಯೋಗ್ರಾಮ್ ಚಿಕಿತ್ಸೆ ಉಚಿತವಾಗಿ ನೀಡಲು ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಹೃದಯದ ಕರೋನರಿ(ಪರಿಧಮನಿ) ಆಂಜಿಯೋಗ್ರಾಮ್ ಅನ್ನು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ವ್ಯಾಪ್ತಿಗೆ ತಂದು ಅರ್ಹರಿಗೆ ಉಚಿತವಾಗಿ ಆಂಜಿಯೋಗ್ರಾಮ್ ನೆರವೇರಿಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.

ಆಯುಷ್ಮಾನ್‌ ಭಾರತ್‌ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆ(AB PMJAY CM’s ArK) ಅಡಿಯಲ್ಲಿ ಕರೋನರಿ ಆಂಜಿಯೋಗ್ರಾಮ್‌ ಚಿಕಿತ್ಸಾ ವಿಧಾನವನ್ನು ಸೇರ್ಪಡಿಸುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆ (AB PMJAY CM’s Ark) ಅಡಿಯಲ್ಲಿ ಲಭ್ಯವಿರುವ ಅನುದಾನದಡಿ ಕರೋನರಿ ಆಂಜಿಯೋಗ್ರಾಮ್ ಚಿಕಿತ್ಸಾ ವಿಧಾನವನ್ನು ಸೇರಿಸಲು ಈ ಕೆಳಕಂಡ ಅಂಶಗಳನ್ನೊಳಗೊಂಡಂತೆ ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆ (AB PMJAY CM’s ArK) ಅಡಿಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಕೈಗೊಳ್ಳಲಾಗುವ ಕರೋನರಿ ಆಂಜಿಯೋಗ್ರಾಮ್ ಚಿಕಿತ್ಸಾ ವಿಧಾನವನ್ನು ಆದ್ಯತಾ ಮನೆ ಮಂದಿ (PHH) ರವರಿಗೆ ಮಾತ್ರ ಸೀಮಿತಗೊಳಿಸಿ, ಸದರಿ ಚಿಕಿತ್ಸಾ ವಿಧಾನಕ್ಕೆ ರೂ.6500/- ಗಳ ದರವನ್ನು ನಿಗದಿಗೊಳಿಸಲಾಗಿದೆ.

ಒಮ್ಮೆ ಮಾಡಲಾದ ಕರೋನರಿ ಆಂಜಿಯೋಗ್ರಾಮ್ ಕಾರ್ಯವಿಧಾನದ ವರದಿಯು 3 ತಿಂಗಳವರೆಗೆ ಮಾನ್ಯವಾಗಿರುತ್ತದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular