HomeKarnatakaಪದವಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾಸಿಕ 3 ಸಾವಿರ ರೂ. ಪಡೆಯಲು ಅರ್ಜಿ ಆಹ್ವಾನ

ಪದವಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾಸಿಕ 3 ಸಾವಿರ ರೂ. ಪಡೆಯಲು ಅರ್ಜಿ ಆಹ್ವಾನ

  ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೊಮೋ ಪಾಸಾದವರು ಯುವನಿಧಿ ಯೋಜನೆಯಡಿ ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿರುತ್ತದೆ. ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ಜಿಲ್ಲೆಯಾದ್ಯಂತ ಇರುವ ಪದವಿ ಕಾಲೇಜುಗಳು ಹಾಗೂ ಡಿಪ್ಲೊಮೋ ಕಾಲೇಜುಗಳು ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಿಶೇಷ ನೋಂದಣಿ ಕೌಂಟರ್ ತೆರೆಯಲಾಗಿದೆ.

ವಿಶೇಷ ನೋಂದಣಿ ಅಭಿಯಾನವನ್ನು ಆಯೋಜಿಸಲಾಗಿದೆ. ಅಲ್ಲದೇ ಗ್ರಾಮಒನ್, ಕರ್ನಾಟಕ ಒನ್, ದಾವಣಗೆರೆ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲೂ ನಿರಂತರವಾಗಿ ಯುವನಿಧಿ ನೋಂದಣಿ ಮಾಡಿಕೊಳ್ಳಬಹುದು. ನಿರುದ್ಯೋಗಿ ಯುವಕ-ಯುವತಿಯರು ಈ ವಿಶೇಷ ನೋಂದಣಿ ಅಭಿಯಾನದ ಸದುಪಯೋಗವನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿ ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular