ಬೆಂಗಳೂರು: ಸಾರ್ವತ್ರಿಕ ನವಜಾತ ಶಿಶು ತಪಾಸಣೆ ಯೋಜನೆ ಜಾರಿಗೆ ಆರೋಗ್ಯ ಇಲಾಖೆಯಿಂದ ಅನುಮೋದನೆ ನೀಡಿದೆ.
ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹೆರಿಗೆಯಾದ ಶಿಶುಗಳ ಜನ್ಮಜಾತ ಆರೋಗ್ಯ ಸಮಸ್ಯೆಗಳ ಪತ್ತೆಗೆ ಸಂಬಂಧಿಸಿದಂತೆ ಈ ಯೋಜನೆ ಜಾರಿಗೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ಪ್ರಾಯೋಗಿಕವಾಗಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯೋಜನೆ ಜಾರಿಗೊಳಿಸಲ ಸೂಚಿಸಲಾಗಿದೆ.
ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹೆರಿಗೆಯಾಗುವ ಎಲ್ಲಾ ನವಜಾತ ಶಿಶುಗಳ ಜನ್ಮಜಾತ ಫಿನಲೈಟೋನೂರಿಯಾ, ಅಡ್ರಿನಲ್ ಹೈಫಾಪ್ಲಾರ್ಸಿಯಾ, ಗ್ಯಾಲಕ್ಟೋಸೆಮಿಯಾ ಸೇರಿ ವಿವಿಧ ಅಸ್ವಸ್ಥತೆ ತಪಾಸಣೆ ನಡೆಸಲಾಗುವುದು. ಪ್ರಾಯೋಗಿಕವಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ತಪಾಸಣೆ ಆರಂಭಿಸಲು ಸೂಚಿಸಲಾಗಿದೆ 57,350 ನವಜಾತ ಶಿಶುಗಳ ತಪಾಸಣೆಗೆ 2.58 ಕೋಟಿ ರೂ.ಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಬಿಡುಗಡೆ ಮಾಡುವಂತೆ ಸೂಚಿಸಲಾಗಿದೆ.