HomeKarnatakaGOOD NEWS : ರಾಜ್ಯದ ಹಿಂದುಳಿದ ವರ್ಗದ ಜನತೆಗೆ ಗುಡ್‌ನ್ಯೂಸ್; ಗಂಗಾ ಕಲ್ಯಾಣ ಸೇರಿ ವಿವಿಧ...

GOOD NEWS : ರಾಜ್ಯದ ಹಿಂದುಳಿದ ವರ್ಗದ ಜನತೆಗೆ ಗುಡ್‌ನ್ಯೂಸ್; ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು :  ಕರ್ನಾಟಕ ಸರ್ಕಾರದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿಗೆ ವಿವಿಧ ಸೌಲಭ್ಯಗಳು ಮತ್ತು ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 30, 2026 ಆಗಿದೆ.ಡಿ.ದೇವರಾಜ ಅರುಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ ಈ ಕೆಳಗಿನ ಯೋಜನೆಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ: ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ.2.00 ಲಕ್ಷಗಳವರೆಗೆ ಆರ್ಥಿಕ ನೆರವು, ರೂ.1.00 ಲಕ್ಷಗಳವರೆಗಿನ ಸಾಲದಲ್ಲಿ ಶೇ.20ರಷ್ಟು ಗರಿಷ್ಠ ರೂ.20,000/-ಗಳ ಸಹಾಯಧನ ಹಾಗೂ ರೂ.1.01ಲಕ್ಷದಿಂದ ರೂ.2.00 ಲಕ್ಷದವರೆಗೆ ಶೇ.15 ರಷ್ಟು ಕನಿಷ್ಠ ರೂ.20,000/-ಗಳವರೆಗೆ ಶೇ.30,000/- ಸಹಾಯಧನ ಉಳಿಕೆ ಮೊತ್ತ ಶೇ.4 ರ ಬಡ್ಡಿದರದಲ್ಲಿ ನಿಗಮದಿಂದ ನೇರವಾಗಿ ಸಾಲ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

❖ ಗಂಗಾ ಕಲ್ಯಾಣ ನೀರಾವರಿ ಯೋಜನೆ: ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ ರೂ.4.75 ಲಕ್ಷ ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ ರೂ.75,000/-ಗಳನ್ನು ಎಸ್ಕಾಸ್ಕಿಗೆ ಪಾವತಿಸಲಾಗುವುದು. ಇಲ್ದಿದ ಜಿಲ್ಲೆಗಳಿಗೆ ರೂ.3.75 ಲಕ್ಷಗಳು ಇದರಲ್ಲಿ ವಿದ್ಯುದ್ದೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ ರೂ.75,000/-ಗಳನ್ನು ಎಸ್ಕಾಸ್ಕಿಗೆ ಪಾವತಿಸಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ ರೂ.50,000/-ಗಳ ಸಾಲವನ್ನು ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಾಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಉಳಿದ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರಿವು-ಶೈಕ್ಷಣಿಕ ಸಾಲ ಯೋಜನೆ: ಈ ಯೋಜನೆಯಡಿ CET ಮತ್ತು NEET ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಎಲ್ಲಾ ಪ್ರವರ್ಗಗಳ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್‌ಗಳ ವ್ಯಾಸಂಗಕ್ಕೆ ವಾರ್ಷಿಕ 1.00 ಲಕ್ಷ ರೂ.ಗಳಂತೆ ಕೋರ್ಸ್‌ನ ಅವಧಿಗೆ ಗರಿಷ್ಠ 4.00 ಲಕ್ಷ ರೂ.ಗಳಿಂದ ರೂ 5.00 ಲಕ್ಷ ರೂ.ಗಳಿಗೆ ವಾರ್ಷಿಕ ಶೇ.2ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ಅಭ್ಯರ್ಥಿ ಮತ್ತು ಅವರ ಕುಟುಂಬದವರ ವಾರ್ಷಿಕ ವರಮಾನವು ರೂ.3.50 ಲಕ್ಷಗಳ ಮಿತಿಯಲ್ಲಿರಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಮಂಜುರಾಗಿ ಹಿಂದಿನ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮುಂದುವರೆಸುವುದಕ್ಕೆ 2ನೇ ಹಾಗೂ ತದನಂತರದ ಕಂತುಗಳ ಸಾಲ ಪಡೆಯಲು ಹಿಂದಿನ 2 ಸೆಮಿಸ್ಟರ್‌ಗಳ ಅಂಕಪಟ್ಟಿ, ಪುಸ್ತಕ ಸಾಲಿನ ವ್ಯಾಸಂಗ ಪ್ರಮಾಣ ಪತ್ರ, ಜಾಮೀನುದಾರರ/ಪೋಷಕರ ಒಪ್ಪಿಗೆ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು.

❖ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ: ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯದ ಪಿ.ಹೆಚ್.ಡಿ., ಪೋಸ್ಟ್ ಡಾಕ್ಟಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿಂಗ್ & ಟೆಕ್ನಾಲಜಿ, ಮ್ಯಾನೇಜ್‌ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಾಲಜಿ, ಅಗ್ರಿಕಲ್ಚರ್ & ಅಲೈಡ್ ಸೈನ್ಸಸ್/ಟೆಕ್ನಾಲಜಿ, ಮೆಡಿಸಿನ್, ಹ್ಯೂಮ್ಯಾನಿಟೀಸ್ & ಸೋಶಿಯಲ್ ಸೈನ್ಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ ಮತ್ತು 3ಎ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 15.00 ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು. QS World Ranking 1000 ರೊಳಗೆ ಬರುವ ವಿಶ್ವ ವಿದ್ಯಾಲಯದಲ್ಲಿ ಪ್ರವೇಶ ಪಡೆದಿರಬೇಕು. ವಾರ್ಷಿಕ ಗರಿಷ್ಠ 25.00 ಲಕ್ಷ ಹಾಗೂ ಪೂರ್ಣ ಕೋರ್ಸ್‌ನ ಅವಧಿಗೆ ರೂ.50.00 ಲಕ್ಷಗಳ ಸಾಲವನ್ನು ಬಡ್ಡಿದರದಲ್ಲಿ ಒದಗಿಸಲಾಗುವುದು. ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ/ಜಾಮೀನುದಾರ/ಪೋಷಕರ స్థిರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು. ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ (Offer Letter) ವಿದ್ಯಾರ್ಥಿಯ ವೀಸಾ ಪಾಸ್ ಪೋರ್ಟ್ ಮತ್ತು ಏರ್ ಟಿಕೆಟ್ ಪ್ರತಿ ಒದಗಿಸಬೇಕು..

❖ ಸ್ವಾವಲಂಬಿ ಸಾರಥಿ ಯೋಜನೆ: ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕ್‌ಗಳಿಂದ ಪಡೆಯುವ ಸಾಲಿಗೆ ಶೇ.50 ರಷ್ಟು, ಗರಿಷ್ಠ ರೂ.3.00 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುವುದು. ಸಾಲ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು, ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಛಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.

❖ ಹೊಲಿಗೆ ಯಂತ್ರ ವಿತರಣೆ ಯೋಜನೆ: ಹಿಂದುಳಿದ ವರ್ಗಗಳ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಲ್ಲಿ ಸಾಲ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳ ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಈ ಮೇಲ್ಕಂಡ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೈಮಾಲಿ ಮತ್ತು ಅಲೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾದಗೋಳ್ಳ, ಮುಕರ, ತಿಗಳ, ಗಾಣಿಗ, ಕುಂಬಾರ, ಹಡಪದ ಕೋದಮ ಮತ್ತು ಈಡಿಗ ಇವರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಈ ಮೇಲ್ಕಂಡ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಡಿಯಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಜಾರಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದರೆ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

2024-25 ಮತ್ತು 2025-26ನೇ ಸಾಲಿನಲ್ಲಿ ಅರ್ಜಿಗಸ್ತಿ ಸೌಲಭ್ಯ ಪಡೆದರೆ! ಇರುವ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಮೇಲ್ಕಂಡ ಸೌಲಭ್ಯವನ್ನು ಪಡೆಯಲು ಇಚ್ಛಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ [http://sevasindhu.karnataka.gov.in](http://sevasindhu.karnataka.gov.in) ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ, ನಿಗಮದ ವೆಬ್‌ಸೈಟ್ www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು 8050770004 ಅಥವಾ 8050770005 ಆಯಾ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು ಅದಂತೆ ಸಂಪರ್ಕಿಸಿವುದು. ಸೇವಾಸಿಂಧು ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಲು ದಿನಾಂಕ:30.09.2026ರಂದು ಕೊನೆಯ ದಿನಾಂಕ ನಿಗಪಡಿಸಿದೆ.

 

📄 Official Documents / Supporting Documents

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular