HomeLatest NewsGOOD NEWS: ಇಂದು ಒಳ ಮೀಸಲಾತಿ ಸಮೀಕ್ಷೆ ವರದಿ ಸಲ್ಲಿಕೆ, ಉದ್ಯೋಗ ನೇಮಕಾತಿ ಪ್ರಕ್ರಿಯೆ ಪುನಾರಂಭ...

GOOD NEWS: ಇಂದು ಒಳ ಮೀಸಲಾತಿ ಸಮೀಕ್ಷೆ ವರದಿ ಸಲ್ಲಿಕೆ, ಉದ್ಯೋಗ ನೇಮಕಾತಿ ಪ್ರಕ್ರಿಯೆ ಪುನಾರಂಭ ಸಾಧ್ಯತೆ

ಬೆಂಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ರಚಿಸಿದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ನೇತೃತ್ವದ ಏಕ ಸದಸ್ಯ ಆಯೋಗ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಿದೆ.

ಜುಲೈ 30ರಂದೇ ವರದಿ ಸಿದ್ದವಾಗಿ ಮುಖ್ಯಮಂತ್ರಿಗಳ ಸಮಯ ಕೇಳಲಾಗಿತ್ತು. ಆದರೆ, ಕಾರ್ಯ ಒತ್ತಡ ಕಾರಣಕ್ಕೆ ಸಿಎಂ ಲಭ್ಯವಿರದ ಕಾರಣ ಆಗಸ್ಟ್ 4ರಂದು ಸೋಮವಾರ ಬೆಳಗ್ಗೆ 11 ಗಂಟೆಗೆ ವರದಿ ಸಲ್ಲಿಕೆಗೆ ಸಮಯ ನಿಗದಿಯಾಗಿದೆ.

ಪರಿಶಿಷ್ಟ ಜಾತಿಗೆ ಶೇಕಡ 17ರಷ್ಟು ಮೀಸಲಾತಿ ನಿಗದಿಯಾಗಿದ್ದು, ಪರಿಶಿಷ್ಟ ಜಾತಿಯಲ್ಲಿ 101 ಉಪ ಜಾತಿಗಳಿವೆ. ಮೀಸಲಾತಿಯನ್ನು ವಿಭಾಗಗಳಾಗಿ ಹಂಚಿಕೆ ಮಾಡುವ ಸಾಧ್ಯತೆ ಇದೆ. ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಎಂಬ ಗೊಂದಲಕ್ಕೆ ಪರಿಹಾರ ಸಿಗಲಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಪರಿಶಿಷ್ಟ ಜಾತಿ ಸಮೀಕ್ಷೆ ಮುಗಿದು ವರದಿ ಅಂಗೀಕಾರವಾಗಿ ಒಳ ಮೀಸಲಾತಿ ಹಂಚಿಕೆಯಾಗುವವರೆಗೆ ಸರ್ಕಾರದಲ್ಲಿ ಹೊಸ ನೇಮಕಾತಿ, ಬಡ್ತಿ ಪ್ರಕ್ರಿಯೆಗೆ ತಡೆ ನೀಡಲಾಗಿತ್ತು. ಇಂದು ಸಮೀಕ್ಷೆಯ ವರದಿ ಸರ್ಕಾರದ ಕೈ ಸೇರಲಿದೆ. ಆಗಸ್ಟ್ 7ರಂದು ಸಂಪುಟ ಸಭೆಯಲ್ಲಿ ವರದಿ ಅಂಗೀಕಾರವಾದಲ್ಲಿ ಹೊಸ ಮತ್ತು ಬಾಕಿ ಇರುವ ನೇಮಕಾತಿ ಪ್ರಕ್ರಿಯೆ ಪುನರಾರಂಭವಾಗಲಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular