ಕನ್ನಡ ಮೀಡಿಯಂ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಗ್ರಾಮೀಣ ಅಭ್ಯರ್ಥಿಗಳ ಮಾದರಿಯಲ್ಲಿ ಉದ್ಯೋಗದಲ್ಲಿ ಕೃಪಾಂಕ

ಗದಗ: ಉದ್ಯೋಗ ನೇಮಕಾತಿಯಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ ಕೃಪಾಂಕ ನೀಡುವ ಮಾದರಿಯಲ್ಲಿಯೇ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಕೃಪಾಂಕ ನೀಡಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸುವುದಾಗಿ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.

ಗಜೇಂದ್ರಗಢ ಪಟ್ಟಣದಲ್ಲಿ ಸೋಮವಾರ 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಉದ್ಯೋಗ ನೇಮಕಾತಿಯಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ ಕೃಪಾಂಕ ನೀಡುವ ರೀತಿಯಲ್ಲಿಯೇ ಕನ್ನಡ ಮಾಧ್ಯಮದಲ್ಲಿ ಓದಿರುವ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಕುರಿತಾಗಿ ನಿರ್ಣಯ ಕೈಗೊಂಡು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದಲ್ಲಿ ಅದರ ಸಾಧಕ ಬಾದಕಗಳ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read