GOOD NEWS : ರಾಜ್ಯದಲ್ಲಿ ಮೊದಲ ಬಾರಿಗೆ ‘ಲ್ಯಾಪ್ ಟಾಪ್’ ಉತ್ಪಾದನಾ ಘಟಕ ಆರಂಭ, 3 ಸಾವಿರ ಉದ್ಯೋಗ ಸೃಷ್ಟಿ

ಬೆಂಗಳೂರು : ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಲ್ಯಾಪ್ ಟಾಪ್ ಉತ್ಪಾದನಾ ಘಟಕ ಆರಂಭವಾಗಲಿದ್ದು, 3 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ.

ಈ ಬಗ್ಗೆ ಸಚಿವ ಎಂಬಿ ಪಾಟೀಲ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಪ್ರಪ್ರಥಮ ಲ್ಯಾಪ್ ಟಾಪ್ ಉತ್ಪಾದನಾ ಘಟಕ ಆರಂಭವಾಗಲಿದ್ದು, ತೈವಾನ್ ಮೂಲದ ವಿಸ್ಟ್ರಾನ್ ಕಂಪನಿ ಈ ನಿಟ್ಟಿನಲ್ಲಿ ₹ 1,500 ಕೋಟಿ ಹೂಡಿಕೆ ಮಾಡಲು ರಾಜ್ಯ ಸರ್ಕಾರದೊಂದಿಗೆ ಅಧಿಕೃತ ಒಡಂಬಡಿಕೆಗೆ ಸಹಿ ಹಾಕಿದೆ ಎಂದಿದ್ದಾರೆ.

ಕೋಲಾರದಲ್ಲಿ ಘಟಕ ಹೊಂದಿರುವ ವಿಸ್ಟಾನ್ ಕಂಪನಿಯ ಹೊಸ ಹೂಡಿಕೆಯಡಿ ಲ್ಯಾಪ್‌ಟಾಪ್ ತಯಾರಿಕಾ ಘಟಕ ಸ್ಥಾಪನೆಯಾಗಲಿದೆ. 2026ರ ಜನವರಿ ವೇಳೆಗೆ ಉತ್ಪಾದನಾ ಚಟುವಟಿಕೆ ಪ್ರಾರಂಭವಾಗಲಿದೆ. 3 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಸಚಿವ ಎಂಬಿ ಪಾಟೀಲ್ ಮಾಹಿತಿ ನೀಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read