Good News : ಶೀಘ್ರವೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ `LKG, UKG’ ತರಗತಿ ಆರಂಭ!

ಶಿವಮೊಗ್ಗ : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಎಲ್.ಕೆ.ಜಿ., ಯುಕೆಜಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಪ್ರದೇಶದ ಮಕ್ಕಳಿಗೆ ದೊರೆಯುತ್ತಿರುವ ಶೈಕ್ಷಣಿಕ ಸೌಲಭ್ಯ ಗ್ರಾಮೀಣ ಭಾಗದ ಮಕ್ಕಳಿಗೂ ಸಿಗುವಂತಾಗಬೇಕು. ಹೀಗಾಗಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಎಲ್.ಕೆ.ಜಿ., ಯುಕೆಜಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರ ತಂದು ಅವರಲ್ಲಿ ಓದುವ ಹವ್ಯಾಸ ಬೆಳೆಸಲು ಯೋಜಿಸಲಾಗಿದೆ. ಹೀಗಾಗಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಗ್ರಂಥಾಲಯ ಅಭಿವೃದ್ಧಿ ಪಡಿಸುತ್ತಿದ್ದು, ಇದರೊಂದಿಗೆ ಇ-ಲೈಬ್ರೆರಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ಇ -ಲೈಬ್ರೆರಿಯಲ್ಲಿ 40 ಲಕ್ಷಕ್ಕೂ ಅಧಿಕ ಪ್ರಕಾರದ ಪುಸ್ತಕಗಳು ದೊರೆಯುತ್ತವೆ. ಇದರ ಸದಸ್ಯತ್ವ ಉಚಿತವಾಗಿರುತ್ತದೆ. ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆಯಂದು ಇ- ಲೈಬ್ರೆರಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read