HomeKarnatakaGOOD NEWS: ಬಿಪಿಎಲ್ ಕಾರ್ಡ್ ಪಡೆಯಲು ಕನಿಷ್ಠ ಆದಾಯ ಮಿತಿ ಮೂರು ಲಕ್ಷ ರೂ.ಗೆ ಏರಿಕೆ

GOOD NEWS: ಬಿಪಿಎಲ್ ಕಾರ್ಡ್ ಪಡೆಯಲು ಕನಿಷ್ಠ ಆದಾಯ ಮಿತಿ ಮೂರು ಲಕ್ಷ ರೂ.ಗೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿ ನೀಡಲು ನಿಗದಿಗೊಳಿಸಿರುವ 1.20 ಲಕ್ಷ ರೂ. ಕನಿಷ್ಠ ಆದಾಯ ಮಿತಿಯನ್ನು ಮೂರು ಲಕ್ಷ ರೂ.ಗೆ ಹೆಚ್ಚಿಸುವ ಸಂಬಂಧ ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಮಂಗಳವಾರ ಬಿಜೆಪಿಯ ಡಾ.ಸಿ.ಎನ್. ಅಶ್ವಥ್ ನಾರಾಯಣ ವಿಚಾರ ಪ್ರಸ್ತಾಪಿಸಿ, ನಗರ ಪ್ರದೇಶದಲ್ಲಿ ಶೇಕಡ 50ರಷ್ಟು ಜನಕ್ಕೆ ಬಿಪಿಎಲ್ ಕಾರ್ಡ್ ಕೊಡಬೇಕು. ಬೆಂಗಳೂರು ನಗರದಲ್ಲಿ ಶೇಕಡ 15 ರಷ್ಟು ಇಲ್ಲ. ಆದಯ ಮಿತಿ ಹೆಚ್ಚಿಸಿ ಬಿಪಿಎಲ್ ಕಾರ್ಡ್ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಉತ್ತರ ನೀಡಿದ ಸಚಿವರು, ಆಡಳಿತ ಸುಧಾರಣಾ ಆಯೋಗ ಬಿಪಿಎಲ್ ಪಡಿತರ ಚೀಟಿ ನೀಡಲು ಕನಿಷ್ಠ ಆದಾಯ ಮಿತಿ ಮೂರು ಲಕ್ಷ ರೂ.ಗೆ ಏರಿಸುವ ಪ್ರಸ್ತಾಪವಿಟ್ಟಿದೆ. ರಾಜ್ಯದ ಶೇಕಡ 73 ರಷ್ಟು ಜನ ಫಲಾನುಭವಿಗಳಿದ್ದರೂ ಹೊಸದಾಗಿ ಬಿಪಿಎಲ್ ಕಾರ್ಡಿಗೆ ಅರ್ಜಿಗಳು ಬರುತ್ತಿವೆ. ಈ ನಡುವೆ ಕೇಂದ್ರ ಸರ್ಕಾರವು ರಾಜ್ಯದಲ್ಲಿ 7.76 ಲಕ್ಷ ಕಾರ್ಡ್ ಗಳು ಬಿಪಿಎಲ್ ವ್ಯಾಪ್ತಿಗೆ ಬರುವುದಿಲ್ಲ. ಮರುಪರಿಶೀಲನೆ ನಡೆಸಿ ಎಪಿಎಲ್ ಗೆ ಬದಲಾವಣೆ ಮಾಡುವಂತೆ ಸೂಚಿಸಿದೆ. ರಾಜ್ಯದಲ್ಲಿ ಶೇಕಡ 50ರಷ್ಟು ಬಿಪಿಎಲ್ ಕಾರ್ಡ್ ಗಳ ಪರಿಶೀಲನೆಯಾಗಿದ್ದು, ಉಳಿದ ಕಾರ್ಡ್ ಗಳ ಪರಿಶೀಲನೆ ನಡೆದಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ 1.24 ಕೋಟಿ ಬಿಪಿಎಲ್ ಪಡಿತರ ಚೀಟಿಗಳಿದ್ದು, 4.50 ಕೋಟಿ ಫಲಾನುಭವಿಗಳಿದ್ದಾರೆ. ಜನಸಂಖ್ಯೆಯ ಶೇಕಡ 73 ರಷ್ಟು ಮಂದಿ ಫಲಾನುಭವಿಗಳಾಗಿದ್ದಾರೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣದಲ್ಲಿ ಶೇಕಡ 52ರಷ್ಟು ದಾಟಿಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular