GOOD NEWS: 5023 ಎಂಬಿಬಿಎಸ್, 5000 ವೈದ್ಯ ಪಿಜಿ ಸೀಟು ಹೆಚ್ಚಳಕ್ಕೆ ಮೋದಿ ಸಂಪುಟ ಅನುಮೋದನೆ

ನವದೆಹಲಿ: 2028- 29ರ ವೇಳೆಗೆ ಸರ್ಕಾರಿ ಸಂಸ್ಥೆಗಳಲ್ಲಿ ಸ್ನಾತಕೋತ್ತರ ವೈದ್ಯ ಸೀಟುಗಳನ್ನು 5,000 ದಷ್ಟು, ಹೆಚ್ಚಿಸಲು ಮತ್ತು ಎಂಬಿಬಿಎಸ್ ಸೀಟುಗಳನ್ನು 5023 ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ವೈದ್ಯಕೀಯ ಕಾಲೇಜುಗಳನ್ನು ಮೇಲ್ದರ್ಜಗೇರಿಸುವ ಮೂರನೇ ಹಂತದ ಯೋಜನೆಗೂ ಸಂಪುಟ ಸಭೆ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 5023 ಎಂಬಿಬಿಎಸ್, 5,000 ಸ್ನಾತಕೋತ್ತರ ವೈದ್ಯ ಸೀಟುಗಳ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಅಲ್ಲದೆ ಶುಲ್ಕದ ಮಿತಿಯ ಬಗ್ಗೆಯೂ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರತಿ ಸೀಟಿಗೆ 1.50 ಕೋಟಿ ರೂ. ಮಿತಿ ನಿಗದಿಪಡಿಸಲಾಗಿದೆ.

 5,000 ಹೊಸ ಪಿಜಿ ಸೀಟುಗಳು, 5,023 ಹೊಸ MBBS ಸೀಟುಗಳು, 2028-29 ರವರೆಗೆ ₹15,034.5 ಕೋಟಿ ಹೂಡಿಕೆ ಮಾಡಲಿದ್ದು, ಈ ಪರಿವರ್ತನಾತ್ಮಕ ಉಪಕ್ರಮವು ಸರ್ಕಾರಿ ವೈದ್ಯಕೀಯ ಸಂಸ್ಥೆಗಳನ್ನು ಬಲಪಡಿಸುತ್ತದೆ ಮತ್ತು ಭಾರತದಾದ್ಯಂತ ತಜ್ಞ ವೈದ್ಯರ ಲಭ್ಯತೆಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ ಎಂದು ಕೇಂದ್ರ ಸಚಿವ ಪಹ್ಲಾದ್ ಜೋಶಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read