GOOD NEWS : ರಾಜ್ಯದ ಶಾಲೆ, ಕಾಲೇಜುಗಳಲ್ಲಿ ‘ಬೋಧಕ’ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ..

ಬೆಂಗಳೂರು : ದಿನಾಂಕ 1-1-2016 ರಿಂದ 31.12 2020 ರ ವರೆಗೆ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಇರುವ ಬೋಧಕ ಹುದ್ದೆಗಳನ್ನು ತುಂಬಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಕ್ರಮಾಂಕ (3), (4) ಮತ್ತು (5) ರನ್ವಯ ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ ದಿನಾಂಕ:31.12.2020 ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ಖಾಲಿ ಇರುವ ಬೋಧಕ ಹುದ್ದೆಗಳನ್ನು ಆರ್ಥಿಕ ಮಿತವ್ಯಯ ಸಡಿಲಿಸಿ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ.

ಆದ್ದರಿಂದ 1994-95 ರ ಶೈಕ್ಷಣಿಕ ಅವಧಿಗೆ ಪೂರ್ವದಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ದಿನಾಂಕ:01.01.2016 ರಿಂದ ದಿನಾಂಕ:31.12.2020 ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತಿಗಳಿಗೊಳಪಟ್ಟು ಭರ್ತಿ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.

ಷರತ್ತುಗಳು:
1. ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ: ಆಇ 384 ವೆಚ್ಚ-8/2013, ದಿನಾಂಕ: 09.04.2013 ರಲ್ಲಿನ ಚೆಕ್ಲಿಸ್ಟ್ ಅನುಬಂಧ-3ರನ್ವಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು.
2. ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳವುದು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read