HomeLatest NewsGOOD NEWS: ಪ್ರಧಾನಮಂತ್ರಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 'ಡಯಾಲಿಸಿಸ್ ಉಚಿತ ಸೇವೆ' ಲಭ್ಯ: ಸದುಪಯೋಗ ಪಡೆಯಲು...

GOOD NEWS: ಪ್ರಧಾನಮಂತ್ರಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ‘ಡಯಾಲಿಸಿಸ್ ಉಚಿತ ಸೇವೆ’ ಲಭ್ಯ: ಸದುಪಯೋಗ ಪಡೆಯಲು ಸೂಚನೆ

ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಡಯಾಲಿಸಿಸ್ ಸೇವೆ ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.

ಜಿಲ್ಲಾ ಆಸ್ಪತ್ರೆಯಲ್ಲಿ ವಿವಿಧ ವಾರ್ಡ್ ಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಾ ಡಯಾಲಿಸಿಸ್ ಸೇವೆಗಳನ್ನು ಅರ್ಹ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಒದಗಿಸುವುದು ಮುಖ್ಯವಾಗಿದೆ ಎಂದರು.

ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ ಜಿಲ್ಲಾ ಆಸ್ಪತ್ರೆ, ಸಿರುಗುಪ್ಪ ಸಾರ್ವಜನಿಕ ಆಸ್ಪತ್ರೆ, ಹಾಗೂ ಸಂಡೂರು ತಾಲ್ಲೂಕುಗಳಲ್ಲಿ ಡಯಾಲಿಸಿಸ್ ಕೇಂದ್ರಗಳು ಉಚಿತವಾಗಿ ಡಯಾಲಿಸಿಸ್ ಸೇವೆ ಒದಗಿಸುತ್ತಿವೆ. ಹೊಸದಾಗಿ ಕುರುಗೋಡು ಹಾಗೂ ಕಂಪ್ಲಿ ತಾಲ್ಲೂಕುಗಳ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 2 ಡಯಾಲಿಸಿಸ್ ಕೇಂದ್ರಗಳು ಹೊಸದಾಗಿ ಅನುಮೋದನೆಯಾಗಿದ್ದು, ಡಯಾಲಿಸಿಸ್ ಸೇವೆಗಳು ಪ್ರಾರಂಭಿಸುವ ಹಂತದಲ್ಲಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಮಾತನಾಡಿ, ಬಳ್ಳಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ (ಬಿ.ಎಮ್.ಸಿ.ಆರ್.ಸಿ) ಯಲ್ಲಿ 100, ಜಿಲ್ಲಾ ಆಸ್ಪತ್ರೆ-50, ಸಿರುಗುಪ್ಪ ಸಾರ್ವಜನಿಕ ಆಸ್ಪತ್ರೆ-7, ಸಂಡೂರು ಸಾರ್ವಜನಿಕ ಆಸ್ಪತ್ರೆ-6 ಸೇರಿದಂತೆ ಒಟ್ಟು 163 ರೋಗಿಗಳು ಉಚಿತ ಡಯಾಲಿಸಿಸ್ ಸೇವೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಡಯಾಲಿಸಿಸ್ ಸೇವೆಗಳಿಗೆ ಅವಶ್ಯವಿರುವ ಸಾಮಾಗ್ರಿ ಏಕಬಳಕೆ ಡಯಾಲೈಜರನ್ನು ಉಪಯೋಗಿಸಲಾಗುತ್ತಿದೆ. ತಾಲೂಕು ಆಸ್ಪತ್ರೆಗಳಲ್ಲಿನ (ತಾಲೂಕುಗಳಲ್ಲಿರುವ ಸಾರ್ವಜನಿಕ ಆಸ್ಪತ್ರೆ) ಡಯಾಲಿಸಿಸ್ ಕೇಂದ್ರಗಳಲ್ಲಿ ಡಯಾಲಿಸಿಸ್ ಪ್ರಕ್ರಿಯೆ/ಕಾರ್ಯವಿಧಾನ ಮುಗಿದ ನಂತರ ರೋಗಿಗಳನ್ನು ಸಂಬAಧಪಟ್ಟ ಆಸ್ಪತ್ರೆಯ ವ್ಯಾಪ್ತಿಯ ನಗುಮಗು ವಾಹನದ ಮೂಲಕ ಮನೆಗೆ ತೆರಳಲು ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ ಎಂದರು.

ಬಳ್ಳಾರಿ ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆಗಳನ್ನು ಸೂಕ್ತ ಸಮಯದಲ್ಲಿ ಒದಗಿಸಲಾಗುತ್ತಿದೆ ಹಾಗೂ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆಯನ್ನು ಪಡೆಯುತ್ತಿರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಸೇವೆಯನ್ನು ಪಡೆಯಲು ಮನ ಒಲಿಸಲು ಆಪ್ತ ಸಮಾಲೋಚನ ನಡೆಸಲಾಗುತ್ತಿದೆ ಎಂದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular