ತಾಲ್ಲೂಕು ಆಸ್ಪತ್ರೆಗಳಲ್ಲಿ ತಾಯಿ ಮತ್ತು ಮಗು ಸೇವೆಯು ದಿನವಿಡೀ ಲಭ್ಯವಿರಬೇಕು ಎಂಬ ವ್ಯವಸ್ಥೆ ತರಲು ನಿರ್ಧಾರ ಮಾಡಲಾಗಿದೆ.
ಅದರಂತೆ ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ ತಲಾ ಇಬ್ಬರು ಪ್ರಸೂತಿ ತಜ್ಞರು, ಅರಿವಳಿಕೆ ತಜ್ಞರು, ಮಕ್ಕಳ ತಜ್ಞರನ್ನು ನೇಮಿಸಲಾಗುತ್ತದೆ. ರಾಜ್ಯದಲ್ಲಿ ಖಾಲಿ ಇರುವ 223 ವೈದ್ಯರು, 400 ಫಾರ್ಮಸಿಸ್ಟ್ ಟೆಕ್ನಿಷಿಯನ್ಸ್, 1300 ಪಿಹೆಚ್‌ಸಿಒ, ಆರೋಗ್ಯ ನಿರೀಕ್ಷಕರ ನೇಮಕಕ್ಕೆ ಸರ್ಕಾರದಿಂದ ಅನುಮತಿ ಸಿಕ್ಕಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ಓಲಾ, ಉಬರ್ ಆ್ಯಪ್ ರೀತಿಯಲ್ಲಿ ಆಯ್ಕೆ ಮಾಡಿಕೊಳ್ಳುವ ಮುಕ್ತ ಅವಕಾಶ ಆಂಬ್ಯುಲೆನ್ಸ್ ಸೇವಾ ಗ್ರಾಹಕರಿಗೂ ನೀಡಬೇಕಿದೆ. ಈ ನಿಟ್ಟಿನಲ್ಲಿ ಪಾರದರ್ಶಕ ಆಯ್ಕೆ ವ್ಯವಸ್ಥೆ ಜಾರಿಗೆ ತರುತ್ತಿದ್ದೇವೆ. ಜೊತೆಗೆ ಖಾಸಗಿ ಸಂಸ್ಥೆ ಮೂಲಕ ನಡೆಸುತ್ತಿರುವ 108 ಆರೋಗ್ಯ ಸೇವೆಯನ್ನು ಕೂಡ ಸರ್ಕಾರದ ಸುಪರ್ದಿಗೆ ಪಡೆದುಕೊಳ್ಳಲಾಗುವುದು. ಮುಂದೆ ಈ ವಾಹನಗಳು ಡಿಸಿ, ಸಿಇಒ, ಡಿಹೆಚ್‌ಒ ಕಂಟ್ರೋಲ್ ನಲ್ಲಿ ಇರಲಿವೆ ಎಂದು ತಿಳಿಸಿದ್ದಾರೆ.
