HomeKarnatakaGOOD NEWS: ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣ

GOOD NEWS: ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪೂರ್ಣ

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹರೀಶ ಪೂಂಜ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. 1,78,935 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿದ್ದು, 45,590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದರು.

ರಾಜ್ಯದಲ್ಲಿ 5,024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32,010 ಹುದ್ದೆಗಳು ಭರ್ತಿಯಾಗಿದ್ದು 12,134 ಹುದ್ದೆಗಳು ಖಾಲಿ ಇರುತ್ತವೆ. ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ 2025-2026ನೇ ಶೈಕ್ಷಣಿಕ ಸಾಲಿಗೆ ಪ್ರಾಥಮಿಕ ಶಾಲೆಗಳಲ್ಲಿ 40,000 ಮತ್ತು ಪ್ರೌಢಶಾಲೆಗಳಲ್ಲಿ 11,000 ಒಟ್ಟಾರೆಯಾಗಿ 51,000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ ಮೂಲಕ ಶಿಕ್ಷಕರ ಕೊರತೆಯನ್ನು ಸರಿದೂರಿಸಲಾಗಿದೆ ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ. ಅಲ್ಲದೇ ವಿಕಲಚೇತನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ವಿಶೇಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ 5 ದಿನ ಬೆಳಿಗ್ಗೆ ಬಿಸಿ ಹಾಲು, ಇದರೊಂದಿಗೆ ಮಿಕ್ಸ್ ರಾಗಿ ಮಾಲ್ಟ್, ಮಧ್ಯಾಹ್ನ ಬಿಸಿ ಊಟದೊಂದಿಗೆ ವಾರದಲ್ಲಿ ಆರು ದಿನ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದರು.

ವಿದ್ಯಾವಿಕಾಸ ಯೋಜನೆಯಡಿ 1 ರಿಂದ 10ನೇ ತರಗತಿಯ ಮಕ್ಕಳಿಗೆ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಸಮವಸ್ತ್ರ ಸರಬರಾಜು ಮಾಡಲು ಮೊದಲನೇ ಜೊತೆ ಸಮವಸ್ತ್ರಕ್ಕಾಗಿ ₹83.07 ಕೋಟಿ ಬಿಡುಗಡೆ ಮಾಡಲಾಗಿದ್ದು, ಎರಡನೇ ಜೊತೆ ಸಮವಸ್ತ್ರಕ್ಕಾಗಿ ₹80.66 ಕೋಟಿ ಲಭ್ಯವಿರುತ್ತದೆ ಎಂದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular