ಬೆಂಗಳೂರು: ಹೊಸದಾಗಿ ರಚನೆಯಾಗಿರುವ 5 ಪಾಲಿಕೆಗಳ ಆಡಳಿತ ನಿರ್ವಹಣೆ, ಅಧಿಕಾರಿ, ಸಿಬ್ಬಂದಿಗಳ ಮೂರು ತಿಂಗಳ ವೇತನಕ್ಕೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, 500 ಎಂಜಿನಿಯರ್ ಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿಯ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿಯಲ್ಲಿ ಬುಧವಾರ ಪೂಜೆ ಸಲ್ಲಿಸಿದ ಅವರು, ಜಿಬಿಎ ನಾಮಫಲಕ ಅನಾವರಣಗೊಳಿಸಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಹೊಸ ಪಾಲಿಕೆಗಳ ಗಡಿ ಗುರುತಿಸುವ ಕಾರ್ಯ ಆರಂಭಿಸಲಾಗಿದೆ. ಎಲ್ಲಾ ಪಾಲಿಕೆಗಳ ಭಾಗಗಳಲ್ಲಿ ಗಡಿ ಗೋಪುರ ನಿರ್ಮಿಸಲಾಗುವುದು. ಐದು ಪಾಲಿಕೆಗಳ ಆಡಳಿತಾತ್ಮಕ ವೆಚ್ಚ, ವೇತನ, ನಿವೃತ್ತಿ ವೇತನಕ್ಕೆ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. 500 ಎಂಜಿನಯರ್ ಗಳನ್ನು ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.