ಬೆಂಗಳೂರು : ಪಶುಪಾಲನಾ ಇಲಾಖೆಯಲ್ಲಿ 700 ʼಡಿʼ ಗ್ರೂಪ್ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದಾರೆ ಎಂದು ಎಂದು ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವರು ಪಶುಪಾಲನಾ ಇಲಾಖೆಯಲ್ಲಿ 700 ʼಡಿʼ ಗ್ರೂಪ್ ನೌಕರರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದು, ಶೀಘ್ರವೇ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಪಶುಸಂಗೋಪನಾ ಸಚಿವರಾದ ಕೆ.ವೆಂಕಟೇಶ್ ತಿಳಿಸಿದ್ದಾರೆ. ಈ ಮೂಲಕ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಂತಾಗಿದೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 400 ಪಶು ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. 400 ಕಾಯಂ ವೈದ್ಯರ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಮಟ್ಟದಲ್ಲಿ ಪ್ರಕ್ರಿಯೆ ನಡೆದಿದೆ. ಇಲಾಖೆಯ ಕೊರತೆಗಳನ್ನು ನೀಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಮತ್ತು ಪುತ್ತೂರಿನಲ್ಲಿ ಸರ್ಕಾರಿ ಪಶು ವೈದ್ಯ ಕಾಲೇಜುಗಳನ್ನು ಈ ವರ್ಷವೇ ಆರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
https://twitter.com/KarnatakaVarthe/status/1848260598834024527?ref_src=twsrc%5Etfw%7Ctwcamp%5Etweetembed%7Ctwterm%5E1848260598834024527%7Ctwgr%5E5e8c06cb764b54fd1b371f6671c468ad59fe6912%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalaunch%3Dtrue