ಜಿಲ್ಲಾ ಕಂಬಳ ಸಮಿತಿಯಿಂದ ಅನುಮೋದನೆಗೊಂಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 23 ಕಂಬಳೋತ್ಸವಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗುವುದು.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಅಶೋಕ್ ರೈ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ. ಪಾಟೀಲ್ ಅವರ ಉತ್ತರ ನೀಡಿದ್ದಾರೆ.
2025-26ನೇ ಸಾಲಿನಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯೋಜಿಸಲಾಗುವ ಕಂಬಳ ಉತ್ಸವಗಳಿಗೆ ಅನುದಾನ ಕೋರಿ ಪ್ರಸ್ತಾವನೆಗಳು ಸ್ವೀಕೃತವಾಗಿವೆ. ಇದಕ್ಕೆ ಸರ್ಕಾರದಿಂದ ಅನುಮೋದನೆ ನೀಡಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಕಡತ ರವಾನಿಸಲಾಗಿದೆ.
2024-25ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ, ಮಂಗಳೂರು, ನರಿಂಗಾಣ, ಮೂಡಬಿದ್ರೆ, ಐಕಳ, ಜಪ್ಪು, ಪುತ್ತೂರು, ಬಂಟ್ವಾಳ, ಉಪ್ಪಿನಂಗಡಿ ಮತ್ತು ವೇಣೂರಿನಲ್ಲಿ ಆಯೋಜಿಸಿದ್ದ ಕಂಬಳೋತ್ಸವಗಳಿಗೆ ತಲಾ ರೂ.5 ಲಕ್ಷದಂತೆ ಒಟ್ಟು ರೂ.50 ಲಕ್ಷಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಶಾಸಕರುಗಳ ಅಭಿಪ್ರಾಯದಂತೆ 23 ಕಂಬಳೋತ್ಸವಗಳಿಗೆ ಅನುದಾನ ಬಿಡುಗಡೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
