HomeKarnatakaGOOD NEWS : ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ...

GOOD NEWS : ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು :   ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತದಿಂದ 2026-27ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಸ್ವಯಂ ಉದ್ಯೋಗ, ಶೈಕ್ಷಣಿಕ ಸಾಲ, ಸ್ವಾವಲಂಬಿ ಸಾರಥಿ ಹಾಗೂ ಗಂಗಾ ಕಲ್ಯಾಣ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳು ಸೆ.30, 2026ರೊಳಗೆ ಸೇವಾಸಿಂಧು ಪೋರ್ಟಲ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ನಿಗಮ ತಿಳಿಸಿದೆ.

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು

  1. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು.

    📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
    APP ತೆರೆಯಿರಿ
  2. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಅಲೆಮಾರಿ ಮತ್ತು ಅರೆ ಅಲೆಮಾರಿ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು.

  3. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.

  4. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು.

  5. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.

  6. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.

  7. ಅರಿವು ಯೋಜನೆಯಡಿ ಅಭ್ಯರ್ಥಿಯ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು. ವಾರ್ಷಿಕ ವರಮಾನದ ಮಿತಿ ರೂ. 3.50 ಲಕ್ಷಗಳು.

  8. ಸ್ವಾವಲಂಬಿ ಸಾರಥಿ ಯೋಜನೆಯಡಿ ವಯೋಮಿತಿ 21 ವರ್ಷಗಳಿಂದ 45 ವರ್ಷಗಳ ಮಿತಿಯಲ್ಲಿರಬೇಕು.

  9. ವಿದೇಶಿ ವ್ಯಾಸಂಗ ಸಾಲ ಯೋಜನೆ: ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.15.00 ಲಕ್ಷಗಳ ಮಿತಿಯಲ್ಲಿ ಇರಬೇಕು.
    ವಯೋಮಿತಿ: ವಿದ್ಯಾರ್ಥಿಯ ವಯಸ್ಸು 25 (ಸ್ನಾತಕೋತ್ತರ ಪದವೀಧರರಿಗೆ) ಮತ್ತು ಪಿ.ಎಚ್‌.ಡಿ. ಪದವೀಧರರಿಗೆ 27 ವರ್ಷಗಳ ವಯೋಮಿತಿಯನ್ನು ನಿಗಧಿಪಡಿಸಲಾಗಿದೆ.

  10. ಅರ್ಜಿದಾರರು ತಮ್ಮ ಮೊಬೈಲ್‌ ಸಂಖ್ಯೆ ಹಾಗೂ ಬ್ಯಾಂಕ್‌ ಖಾತೆಯನ್ನು ತಮ್ಮ ಆಧಾರ್‌ ಸಂಖ್ಯೆಗೆ ಜೋಡಣೆ ಮಾಡಿರಬೇಕು.

  11. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ.98,000/- ಮತ್ತು ನಗರ ಪ್ರದೇಶದವರಿಗೆ ರೂ.1,20,000/- ಗಳ ಮಿತಿಯೊಳಗಿರಬೇಕು.

  12. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33 ರಷ್ಟು, ವಿಕಲಚೇತನರಿಗೆ ಶೇ.5 ರಷ್ಟು, ತೃತೀಯ ಲಿಂಗಿಗಳಿಗೆ ಶೇ.1 ರಷ್ಟು ಮೀಸಲಾತಿ ಇರಿಸಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸ್ವೀಕರಿಸುವ ಯೋಜನೆಗಳು:

  1. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ

  2. ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ)

  3. ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ)

  4. ಸ್ವಾವಲಂಬಿ ಸಾರಥಿ ಯೋಜನೆ.

  5. ಗಂಗಾ ಕಲ್ಯಾಣ ಯೋಜನೆ
    (ಈ ಯೋಜನೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಇತರೇ ಜಿಲ್ಲೆಗಳಲ್ಲಿ ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು.)

ಸೂಚನೆಗಳು:

➤ ಅರ್ಜಿ ಸಲ್ಲಿಸುವಾಗ ಆಧಾರ್‌ ಕಾರ್ಡಿನಲ್ಲಿರುವಂತೆ ಅರ್ಜಿದಾರರ ಹೆಸರು, ವಿಳಾಸ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳಲ್ಲಿನ ಹೆಸರು, ವಿಳಾಸ ಹಾಗೂ ಬ್ಯಾಂಕ್‌ ಪಾಸ್‌ಪುಸ್ತಕಗಳಲ್ಲಿನ ಹೆಸರು ಕಡ್ಡಾಯವಾಗಿ ತಾಳೆಯಾಗಬೇಕು.

➤ ಬೆಂಗಳೂರು-ಒನ್‌/ಕರ್ನಾಟಕ-ಒನ್‌/ಅಟಲ್‌-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ ಮೂಲಕ ಸೇವಾಸಿಂಧು ಪೋರ್ಟಲ್‌ನಡಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.

➤ ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‌ಸೈಟ್‌ https://kaad.karnataka.gov.in/ ರಲ್ಲಿ ಅಥವಾ ನಿಗಮದ ಕೇಂದ್ರ ಕಛೇರಿ ದೂರವಾಣಿ ಸಂಖ್ಯೆ: 080-22374832/833 ಯಿಂದ ಪಡೆಯಬಹುದಾಗಿದೆ. ಹಾಗೂ ಜಿಲ್ಲೆಗಳಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಛೇರಿಗಳಲ್ಲಿ ಬೆಳಗ್ಗೆ 10.00 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.

➤ ವಿಶೇಷ ಸೂಚನೆ:- 2024-25 ಮತ್ತು 2025-26ನೇ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಅರ್ಜಿದಾರರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅಂತಹ ಅರ್ಜಿದಾರರನ್ನು ಪ್ರಸ್ತುತ ಸಾಲಿಗೂ ಸಹ ಪರಿಗಣಿಸಲಾಗುವುದು.

➤ 2024-25 ಮತ್ತು 2025-26ನೇ ಸಾಲುಗಳಲ್ಲಿ ಅರ್ಜಿ ಸಲ್ಲಿಸಿರುವ ಯೋಜನೆಯನ್ನು ಹೊರತುಪಡಿಸಿ ಉಳಿದ ಯೋಜನೆಗಳಿಗೆ ಪ್ರಸ್ತುತ ಅರ್ಜಿ ಸಲ್ಲಿಸಬಹುದಾಗಿದೆ.

ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 30-09-2026 ರ ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular