ಮನುಷ್ಯನ ದೇಹಕ್ಕೆ ಉತ್ತಮ ಮೊಳಕೆ ಕಾಳು ಸೇವನೆ

ಮೊಳಕೆಕಾಳಿನಲ್ಲಿ ಹಲವು ರೋಗನಿರೋಧಕ ಶಕ್ತಿಗಳಿವೆ. ಮೊಳಕೆಕಾಳಿನಲ್ಲಿ ಹಲವು ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗುವ ಅಂಶಗಳು ಇವೆ. ಅದರಲ್ಲೂ ಮನುಷ್ಯನ ದೇಹಕ್ಕೆ ಮೊಳಕೆ ಕಾಳು ಇನ್ನು ಉತ್ತಮ. ಹೇಗೆ ಅಂತೀರಾ ಇಲ್ಲಿದೆ ನೋಡಿ.

* ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಮೊಳಕೆ ಕಾಳು ತಿನ್ನುವುದು ಒಳ್ಳೆಯದು. ಇದರಲ್ಲಿರುವ ಪೋಷಕಾಂಶಗಳು ಆಹಾರವನ್ನು ಸರಿಯಾಗಿ ಜೀರ್ಣವಾಗಲು ಸಹಕರಿಸುತ್ತದೆ.

* ರಕ್ತ ಪರಿಚಲನೆಗೆ ಮೊಳಕೆ ಕಾಳಿನ ಸೇವನೆ ಉತ್ತಮ. ಇದರಲ್ಲಿ ಕಬ್ಬಿಣ ಮತ್ತು ತವರದ ಅಂಶ ಸಾಕಷ್ಟಿದ್ದು, ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಎಷ್ಟು ಬೇಕೋ ಅಷ್ಟು ಇರುವಂತೆ ನೋಡಿಕೊಳ್ಳುತ್ತದೆ.

* ತೂಕ ಇಳಿಸಲು ಡಯಟ್ ಮಾಡುವವರ ಆಹಾರದಲ್ಲಿ ಮೊಳಕೆ ಕಾಳು ಇರಲೇ ಬೇಕು. ಇದರಲ್ಲಿ ಫೈಬರ್ ಅಂಶ ಸಾಕಷ್ಟಿದ್ದು, ಹೊಟ್ಟೆ ತುಂಬಿರುವಂತೆ ಮಾಡುತ್ತದೆ. ಇದರಿಂದಾಗಿ ಆಗಾಗ ತಿನ್ನಬೇಕಾಗುವುದಿಲ್ಲ, ನಾಲಿಗೆ ಮೇಲೂ ಕಡಿವಾಣ ಹಾಕಬಹುದು.

* ಮೊಳಕೆ ಕಾಳಿನಲ್ಲಿ ವಿಟಮಿನ್ ಸಿ ಅಂಶ ಸಾಕಷ್ಟಿರುವುದರಿಂದ ರೋಗ ನಿರೋಧಕ ಶಕ್ತಿಯಿದೆ. ಅಂತೆಯೇ ಇದರಲ್ಲಿ ವಿಟಮಿನ್ ಎ ಅಂಶವೂ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read