ಗೂಡ್ಸ್ ವಾಹನ- ಬೈಕ್ ಭೀಕರ ಅಪಘಾತ: ಕಾನ್ಸ್ ಟೇಬಲ್ ದುರ್ಮರಣ

ಬೆಂಗಳೂರು: ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಶಸ್ತ್ರ ಮೀಸಲು ಪಡೆಯ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗರಬಾವಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.

27 ವರ್ಷದ ಮನು ಸಿ.ಬಿ ಮೃತ ದುರ್ದೈವಿ. ರಸ್ತೆಬದಿ ಬಿದ್ದಿದ್ದ ಮರಳಿನಿಂದ ಬೈಕ್ ಸ್ಕಿಡ್ ಆಗಿ ನಿಯಂತ್ರಣತಪ್ಪಿ ಬೈಕ್ ಮುಂದೆ ಚಲಿಸುತ್ತಿದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾನ್ಸ್ ಟೇಬಲ್ ಮನು ಗಂಭೀರವಾಗಿ ಗಾಯಗೊಂಡಿದ್ದರು. ತಲೆ ಭಾಗದಲ್ಲಿ ತೀವ್ರವಾದ ಪೆಟ್ಟಾಗಿತ್ತು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಸೋಮವಾರವಷ್ಟೇ ಮನು ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು. ಈಗ ಅಪಘಾತದಲ್ಲಿ ಮೃತಪಟ್ಟಿದ್ದು, ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read