ನವದೆಹಲಿ: ಬೆಟ್ಟಿಂಗ್ ಆಪ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಗೂಗಲ್ ಹಾಗೂ ಮೇಟಾ ಕಂಪನಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಆನ್ ಲೈನ್ ಬೆಟ್ಟಿಂಗ್ ಆಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಗೂಗಲ್ ಹಾಗೂ ಮೇಟಾ ಕಂಪನಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ಜುಲೈ 21ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಬೆಟ್ಟಿಂಗ್ ಆಪ್ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಸೆಲೆಬ್ರಿಟಿಗಳಿಗೆ ನೋಟಿಸ್ ನೀಡಿರುವ ಇಡಿ, ಹಲವರನ್ನು ವಿಚಾರಣೆಗೆ ಒಳಪಡಿಸಿದೆ. ಈ ತನಿಖೆಯ ಮುಂದುವರೆದ ಭಾಗವಾಗಿ ಇದೀಗ ಗೂಗಲ್ ಹಾಗೂ ಮೇಟಾ ಕಂಪನಿಗಳಿಗೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.