HomeKarnatakaರಾಜ್ಯದ ಪ್ರೌಢಶಾಲೆ ಶಿಕ್ಷಕರು, ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್ : ವಿಶೇಷ ಭತ್ಯೆ ಸೌಲಭ್ಯ ವಿಸ್ತರಿಸಿ...

ರಾಜ್ಯದ ಪ್ರೌಢಶಾಲೆ ಶಿಕ್ಷಕರು, ಪಿಯು ಉಪನ್ಯಾಸಕರಿಗೆ ಗುಡ್ ನ್ಯೂಸ್ : ವಿಶೇಷ ಭತ್ಯೆ ಸೌಲಭ್ಯ ವಿಸ್ತರಿಸಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರವು ಪ್ರೌಢಶಾಲಾ ಶಿಕ್ಷಕರು, ಪಿಯು ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸರ್ಕಾರಿ, ಅನುದಾನಿತ ಪ್ರೌಢಶಾಲಾ ಹಾಗೂ ಪಿಯು ಕಾಲೇಜುಗಳಲ್ಲಿ 2008ರ ಪೂರ್ವದಲ್ಲಿ ನೇಮಕಗೊಂಡ ಶಿಕ್ಷಕರು, ಉಪನ್ಯಾಸಕರಿಗೆ ವಿಶೇಷ ಭತ್ಯೆ ಸೌಲಭ್ಯ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

6ನೇ ವೇತನ ಆಯೋಗದ ಶಿಫಾರಿಸಿನ ಆಧಾರದಲ್ಲಿ ಪ್ರೌಢಶಾಲಾ ಶಿಕ್ಷಕರು, ಪಿಯು ಉಪನ್ಯಾಸಕರಿಗೆ ವಿಶೇಷ ಭತ್ಯೆ ಕಲ್ಪಿಸುವ ಕುರಿತಂತೆ ಹೈಕೋರ್ಟ್‌ ಪರವಾಗಿ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ತೀರ್ಪಿನ ಆಧಾರದಲ್ಲಿ ಶಿಕ್ಷಣ ಇಲಾಖೆಯು ಅದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಆದೇಶದಿಂದ ಪಿಯು ಇಲಾಖೆಯಲ್ಲಿ 12,853 ಉಪನ್ಯಾಸಕರ ಪೈಕಿ 4,985  ಉಪನ್ಯಾಸಕರು ಫಲಾನುಭವಿಗಳಾಗಲಿದ್ದಾರೆ. ಪ್ರೌಢಶಾಲೆಯಲ್ಲಿ 1 ಸಾವಿರಕ್ಕಿಂತ ಹೆಚ್ಚು ಶಿಕ್ಷಕರು ವಿಶೇಷ ಭತ್ಯೆಯ ಲಾಭ ಪಡೆಯಲಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular