HomeKarnatakaBREAKING : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ 'ಗೋಪಾಲ್ ಜೋಶಿ' ಅರೆಸ್ಟ್ |Gopal Joshi

BREAKING : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ‘ಗೋಪಾಲ್ ಜೋಶಿ’ ಅರೆಸ್ಟ್ |Gopal Joshi

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರು ಗೋಪಾಲ್ ಜೋಶಿ ಅವರನ್ನು ಬೆಳಗಾವಿ ಬಳಿ ಬಂಧಿಸಿದ್ದಾರೆ. ಇದೇ ವೇಳೆ ಪ್ರಹ್ಲಾದ್ ಜೋಶಿ ಸಹೋದರಿ ಎನ್ನಲಾದ ವಿಜಯಲಕ್ಷ್ಮೀ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ದೇವಾನಂದ ಚೌವ್ಹಾಣ್ ಹಾಗೂ ಪತ್ನಿ ಸುನೀತಾ ಚೌವ್ಹಾಣ್ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 5 ಕೋಟಿಗೆ ಬೇಡಿಕೆ ಇಟ್ಟಿದ್ದ ಗೋಪಾಲ್ ಜೋಶಿ. ಆದರೆ ದೇವಾನಂದ ದಂಪತಿತಿ 5 ಕೋಟಿ ನೀಡಲು ಸಾಧ್ಯವಿಲ್ಲ ಎಂದಿದ್ದಾಗ 2 ಕೋಟಿ ರೂಪಾಯಿ ಹಣ ಪಡೆದಿದ್ದರು. 2 ಕೋಟಿ ಹಣಪಡೆದು ಟಿಕೆಟ್ ನೀಡದೇ ವಂಚಿಸಿದ್ದೂ ಅಲ್ಲದೇ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುನೀತಾ ಚೌವ್ಹಾಣ್ ನೀಡಿದ ದೂರಿನ ಹಿನ್ನೆಲೆಯಲಿ ಗೋಪಾಲ್ ಜೋಶಿ, ಅವರ ಮಗ ಹಾಗೂ ಸಹೋದರಿ ವಿರುದ್ಧ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಇದೀಗ ಪ್ರಕರಣ ಸಂಬಂಧ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular