ಬೆಂಗಳೂರು: ಮಸೂದೆಗಳಿಗೆ ರಾಜ್ಯಪಾಲರು ಅಂಕಿತ ಹಾಕದಿದ್ದಲ್ಲಿ ತಮಿಳುನಾಡಿನ ರೀತಿ ನಾವು ಕೂಡ ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಮಸೂದೆಗಳನ್ನು ವಾಪಸ್ ಕಳಿಸುವುದು ಹೊಸದೇನಲ್ಲ. ತಮಿಳುನಾಡಿನಲ್ಲೂ ಇದೇ ರೀತಿ ಮಾಡಿದ್ದಾರೆ. ಮಸೂದೆಗಳಿಗೆ ಸ್ಪಷ್ಟನೆ ಕೇಳಿದಲ್ಲಿ ಸ್ಪಷ್ನಟ ಕೊಡುತ್ತೇವೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು, ಮಸೂದೆಗಳನ್ನು ವಾಪಸ್ ಕಳಿಸುವ ರಾಜ್ಯಪಾಲರ ಕ್ರಮ ಸರಿಯಲ್ಲ. ರಾಜ್ಯಪಾಲರ ಈ ನಡೆಯ ವಿರುದ್ಧ ಕೋರ್ಟ್ ಗೆ ಹೋಗುವುದು ಅನಿವಾರ್ಯ ಎಂದು ಹೇಳಿದ್ದಾರೆ.