HomeKarnatakaಗಣರಾಜ್ಯೋತ್ಸವ ಸಂಭ್ರಮ: ಬೆಂಗಳೂರಿನಲ್ಲಿಂದು ರಾಜ್ಯಪಾಲರಿಂದ ಧ್ವಜಾರೋಹಣ

ಗಣರಾಜ್ಯೋತ್ಸವ ಸಂಭ್ರಮ: ಬೆಂಗಳೂರಿನಲ್ಲಿಂದು ರಾಜ್ಯಪಾಲರಿಂದ ಧ್ವಜಾರೋಹಣ

ಬೆಂಗಳೂರಿನಲ್ಲಿ ಇಂದು 74ನೇ ಗಣರಾಜ್ಯೋತ್ಸವ ಆಚರಿಸಲಾಗುವುದು. ಎಂಜಿ ರಸ್ತೆಯ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಮಾರಂಭ ನಡೆಯಲಿದೆ.

ಬೆಳಗ್ಗೆ 8:58ಕ್ಕೆ ರಾಜ್ಯಪಾಲ ಗೆಹ್ಲೊಟ್ ಮೈದಾನಕ್ಕೆ ಆಗಮಿಸಲಿದ್ದು, 9 ಗಂಟೆಗೆ ದ್ವಜಾರೋಹಣ ನೆರವೇರಿಸಲಿದ್ದಾರೆ. ಧ್ವಜಾರೋಹಣದ ಬಳಿಕ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ನಂತರ ನಾಡಿನ ಜನತೆಗೆ ರಾಜ್ಯಪಾಲರು ಗಣರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಥ ಸಂಚಲನದಲ್ಲಿ ಪೊಲೀಸರು, ಸ್ಕೌಟ್ ಮತ್ತು ಗೈಡ್ಸ್, ಎನ್‌ಸಿಸಿ, ಸೇವಾದಳ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಗೌರವ ರಕ್ಷೆ ಸ್ವೀಕರಿಸುವರು. 38 ತುಕಡಿಗಳಲ್ಲಿ ಸುಮಾರು 1,520 ಮಂದಿ ಭಾಗವಹಿಸಲಿದ್ದಾರೆ. ಸುಮಾರು 2000 ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ನಂತರ ರಾಜ್ಯಪಾಲರು ಬಹುಮಾನ ವಿತರಿಸಲಿದ್ದಾರೆ. ಕಾರ್ಯಕ್ರಮದ ಹಿನ್ನಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular