HomeKarnatakaಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಹಿನ್ನೆಲೆ ಎಚ್ಚೆತ್ತ ಸರ್ಕಾರ: ಇಂದು ಸಿಎಂ ಮಹತ್ವದ ಸಭೆ

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಹಿನ್ನೆಲೆ ಎಚ್ಚೆತ್ತ ಸರ್ಕಾರ: ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಬಾಣಂತಿಯರ ಸರಣಿ ಸಾವಿನ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ.

ಸಂಜೆ 4:30ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಪರಿಶೀಲನಾ ಸಭೆ ನಡೆಸದಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸಲಿದ್ದು, ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಭಾಗವಹಿಸಲಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರ ಸಾವಿಗೆ ಗ್ಲುಕೋಸ್ ಕಾರಣವಾಗಿರಬಹುದು ಎನ್ನುವ ಶಂಕೆಯನ್ನು ಆರೋಗ್ಯ ಇಲಾಖೆ ವ್ಯಕ್ತಪಡಿಸಿದ್ದು, ಪರೀಕ್ಷೆಗಾಗಿ ಅದನ್ನು ಪ್ರಯೋಗ ಕಳುಹಿಸಲಾಗಿದೆ. ರಿಂಗರ್ ಲ್ಯಾಕ್ಟೇಟಟ್ ಸಲ್ಯೂಷನ್ ಸಾವಿಗೆ ಕಾರಣವಾಗಿದ್ದಲ್ಲಿ ಕಂಪನಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರ ಸಾವಿಗೆ ಸಂಬಂಧಿಸಿದಂತೆ ನಡೆದ ಪ್ರಾಥಮಿಕ ತನಿಖೆಯಲ್ಲಿ ಆಸ್ಪತ್ರೆಯ ಲೋಪ ಕಂಡು ಬಂದಿಲ್ಲ. ಸ್ವತಂತ್ರವಾಗಿ ವಿವರವಾದ ತನಿಖೆಯನ್ನು ಪ್ರತ್ಯೇಕವಾಗಿ ನಡೆಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಆಯುಕ್ತರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular