HomeLatest Newsಕ್ವಾಂಟಮ್‌ ಸಿಟಿ ಸ್ಥಾಪನೆಗೆ ಸರ್ಕಾರದಿಂದ ಹೆಸರಘಟ್ಟದಲ್ಲಿ 6.17 ಎಕರೆ ಜಾಗ ಮಂಜೂರು

ಕ್ವಾಂಟಮ್‌ ಸಿಟಿ ಸ್ಥಾಪನೆಗೆ ಸರ್ಕಾರದಿಂದ ಹೆಸರಘಟ್ಟದಲ್ಲಿ 6.17 ಎಕರೆ ಜಾಗ ಮಂಜೂರು

ಅತ್ಯಾಧುನಿಕ ಪ್ರಯೋಗಾಲಯಗಳು, ಸ್ಟಾರ್ಟ್‌ಅಪ್‌ ಗಳಿಗೆ ಇನ್ಕ್ಯೂಬೇಷನ್‌ ಸೌಲಭ್ಯಗಳು ಹಾಗೂ ಕೈಗಾರಿಕಾ – ಶೈಕ್ಷಣಿಕ ಸಹಭಾಗಿತ್ವಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಹೊಂದಿರುವ ಕ್ವಾಂಟಮ್‌ ಸಿಟಿ ಸ್ಥಾಪನೆಗೆ ಸರ್ಕಾರ ಹೆಸರಘಟ್ಟದಲ್ಲಿ 6.17 ಎಕರೆ ಜಾಗವನ್ನು ಮಂಜೂರು ಮಾಡಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜ್ ತಿಳಿಸಿದ್ದಾರೆ.

ಕ್ವಾಂಟಮ್ ಕಂಪ್ಯೂಟರ್ ಕ್ಷೇತ್ರದಲ್ಲಿ 2035 ರ ವೇಳೆಗೆ ಕರ್ನಾಟಕವನ್ನು 20 ಶತಕೋಟಿ ಡಾಲರ್ ಕ್ವಾಂಟಮ್ ಆರ್ಥಿಕ ರಾಜ್ಯವನ್ನಾಗಿ ಅಭಿವೃದ್ಧಿಪಡಿಸಲು ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಇದಕ್ಕೆ ಪೂರಕವಾಗಿ ಕ್ವಾಂಟಮ್ ಸಿಟಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ದೇಶದಲ್ಲಿ ಮೊದಲ ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮಾವೇಶದಲ್ಲಿ ನೀಡಿದ ಭರವಸೆಯಂತೆ ಕ್ವಾಂಟಮ್ ಸಿಟಿಗೆ ಜಾಗವನ್ನು ಮಂಜೂರು ಮಾಡಲಾಗಿದೆ. ಹೆಸರಘಟ್ಟದಲ್ಲಿ ನಿರ್ಮಾಣವಾಗಲಿರುವ ಕ್ವಾಂಟಮ್ ಸಿಟಿ ಜಾಗತಿಕ ಪ್ರತಿಭೆ ಹೂಡಿಕೆಗಳನ್ನು ಆಕರ್ಷಿಸಲಿದೆ. ಬೆಂಗಳೂರನ್ನು ಭಾರತದ ಮತ್ತು ವಿಶ್ವದ ಕ್ವಾಂಟಮ್ ಭೂಪಟದ ಪ್ರಮುಖ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಸಹಕಾರಿಯಾಗಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular