ನವರಾತ್ರಿಗೆ ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಉಜ್ವಲ ಯೋಜನೆಯಡಿ ಹೆಚ್ಚುವರಿ 25 ಲಕ್ಷ ಗ್ಯಾಸ್ ಸಂಪರ್ಕ

ನವದೆಹಲಿ: ನವರಾತ್ರಿಯಂದು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 25 ಲಕ್ಷ ಹೆಚ್ಚುವರಿ ಎಲ್‌ಪಿಜಿ ಸಂಪರ್ಕಗಳನ್ನು ಸರ್ಕಾರ ಪ್ರಕಟಿಸಿದೆ.

ಹೌದು, ನವರಾತ್ರಿಯ ಮೊದಲ ದಿನದಂದು, ಪ್ರಸಕ್ತ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ 25 ಲಕ್ಷ ಹೆಚ್ಚುವರಿ ಎಲ್‌ಪಿಜಿ ಸಂಪರ್ಕಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ.

ಈ ಸಂದರ್ಭದಲ್ಲಿ ಮಹಿಳಾ ಫಲಾನುಭವಿಗಳಿಗೆ ಶುಭಾಶಯಗಳನ್ನು ತಿಳಿಸಿದ ಪ್ರಧಾನಿ ನರೇಂದ್ರ ಮೋದಿ, ಸರ್ಕಾರದ ಈ ಕ್ರಮವು ಈ ಪವಿತ್ರ ಹಬ್ಬದಂದು ಅವರಿಗೆ ಹೊಸ ಸಂತೋಷವನ್ನು ತರುವುದಲ್ಲದೆ, ಮಹಿಳಾ ಸಬಲೀಕರಣದ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, 25 ಲಕ್ಷ ಹೊಸ ಎಲ್‌ಪಿಜಿ ಸಂಪರ್ಕಗಳ ಪ್ರತಿ ಸಂಪರ್ಕಕ್ಕೂ ಸರ್ಕಾರ ಎರಡು ಸಾವಿರ ರೂಪಾಯಿಗಳಿಗಿಂತ ಹೆಚ್ಚು ಖರ್ಚು ಮಾಡಲಿದೆ ಎಂದು ತಿಳಿಸಿದರು.

ಈ ವಿಸ್ತರಣೆಯೊಂದಿಗೆ, ಉಜ್ವಲ ಕುಟುಂಬದ ಸದಸ್ಯರ ಸಂಖ್ಯೆ 10.58 ಕೋಟಿಗೆ ಏರಲಿದೆ. ಎಲ್ಲಾ ಮಹಿಳೆಯರಿಗೆ ಶುದ್ಧ ಅಡುಗೆ ಇಂಧನ ಸುಲಭವಾಗಿ ಲಭ್ಯವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಖಚಿತಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read