HomeKarnatakaಸೆ. 30 ರವರೆಗೆ ಜಿಬಿಎ ಪಾಲಿಕೆಗಳ ಚುನಾವಣೆ ವಿಸ್ತರಣೆಗೆ ಸರ್ಕಾರ ಮನವಿ

ಸೆ. 30 ರವರೆಗೆ ಜಿಬಿಎ ಪಾಲಿಕೆಗಳ ಚುನಾವಣೆ ವಿಸ್ತರಣೆಗೆ ಸರ್ಕಾರ ಮನವಿ

ಬೆಂಗಳೂರು: ಜನಗಣತಿ ನೆಪ ಮಾಡಿ ಗ್ರೇಟರ್ ಬೆಂಗಳೂರು ಪ್ರದೇಶ ವ್ಯಾಪ್ತಿಯ 5 ನಗರಪಾಲಿಕೆಗಳ ಚುನಾವಣೆ ನಡೆಸುವ ಕಾಲಾವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ರಾಷ್ಟ್ರೀಯ ಜನಗಣತಿ ಪ್ರಕ್ರಿಯೆ ಆರಂಭವಾಗಿದ್ದು, ಹೆಚ್ಚಿನ ಸಿಬ್ಬಂದಿ, ಅಧಿಕಾರಿಗಳನ್ನು ನಿಯೋಜಿಸಬೇಕಿರುವ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡುವಂತೆ ಕೋರಲಾಗಿದೆ. ಗ್ರೇಟರ್ ಬೆಂಗಳೂರು ಪ್ರದೇಶ ವ್ಯಾಪ್ತಿಯ 5 ನಗರ ಪಾಲಿಕೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ವಾರ್ಡ್ ಮೀಸಲಾತಿಯನ್ನು ಸರ್ಕಾರ ಅಂತಿಮಗೊಳಿಸಿದೆ. ರಾಜ್ಯ ಚುನಾವಣಾ ಆಯೋಗ ಅಂತಿಮ ಮತದಾರರ ಪಟ್ಟಿ ಪ್ರಕಟಿಸಬೇಕಿದೆ. ನಿರೀಕ್ಷೆಯಂತೆ ಮೇ ತಿಂಗಳ ಅಂತ್ಯ ಅಥವಾ ಜೂನ್ ಎರಡನೇ ವಾರದೊಳಗೆ ಪಾಲಿಕೆಗಳ ಚುನಾವಣೆ ನಡೆಯಲಿರುವ ಸಾಧ್ಯತೆ ಇತ್ತು. ಆದರೆ ಚುನಾವಣೆ ನಡೆಸುವ ಅವಧಿಯನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸುವಂತೆ ಸರ್ಕಾರ ಕೋರಿದೆ.

ಜನಗಣತಿ ಪ್ರಕ್ರಿಯೆ ಆರಂಭವಾಗಿದ್ದು ಜಿಬಿಎ ಪಾಲಿಕೆಯ ಹೆಚ್ಚಿನ ಸಿಬ್ಬಂದಿ, ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭವಾಗುವ ನಿರೀಕ್ಷೆ ಇದೆ. ಮೇ ಮತ್ತು ಜೂನ್ ತಿಂಗಳಲ್ಲಿ ಶೈಕ್ಷಣಿಕ ಪರೀಕ್ಷಾ ಕೆಲಸಗಳು ನಡೆಯಲಿವೆ. ಈ ಪ್ರಕ್ರಿಯೆಗೆ ಹೆಚ್ಚಿನ ಸಂಖ್ಯೆಯ ಸಿಬ್ಬಂದಿ, ಅಧಿಕಾರಿಗಳನ್ನು ನೇಮಿಸಬೇಕಿದೆ. ಹೀಗಿರುವಾಗ ಚುನಾವಣಾ ಪ್ರಕ್ರಿಯೆ ಆರಂಭಿಸಿದರೆ ಸಿಬ್ಬಂದಿ, ಅಧಿಕಾರಿ ಕೊರತೆಯಾಗುತ್ತದೆ. ಕಾರ್ಯದೊತ್ತಡ ಹೆಚ್ಚಾಗುತ್ತದೆ. ಹೀಗಾಗಿ ಸಮರ್ಪಕವಾಗಿ ಚುನಾವಣಾ ಪ್ರಕ್ರಿಯೆ ಸಿದ್ಧವಾಗಲು ಸಾಧ್ಯವಾಗುವುದಿಲ್ಲ. ಚುನಾವಣೆ ನಡೆಸುವ ಕಾಲಾವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸುವುದನ್ನು ಪರಿಶೀಲಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಕೆ.ಜಿ. ಜಗದೀಶ್ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಎಸ್. ಹೊನ್ನಾಂಬ ಅವರಿಗೆ ಪತ್ರ ಬರೆದು ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular