ಬೆಂಗಳೂರು: ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 16,925 ಬೋಧಕರು ಮತ್ತು ಬೋಧಕೇತರ ಹುದ್ದೆಗಳನ್ನು 2026 -27 ನೇ ಸಾಲಿಗೆ ಮುಂದುವರೆಸಲು ರಾಜ್ಯ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರಾದ ವಿದ್ಯಾಕುಮಾರಿ ತಿಳಿಸಿದ್ದಾರೆ.
ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಕಚೇರಿಯ 76, ಜಿಲ್ಲಾ ಕಛೇರಿಯ 370, ತಾಲೂಕು ಮತ್ತು ವಲಯ ಕಚೇರಿಗಳ 15,105 ಹುದ್ದೆಗಳು, ಡಿಪಿಇಪಿ ಯೋಜನೆಯಡಿ 75 ತಾತ್ಕಾಲಿಕ ಗುತ್ತಿಗೆ ಹುದ್ದೆಗಳು, 1292 ಆಡಳಿತ ಹುದ್ದೆಗಳ ಮುಂದುವರೆಸಲು ರಾಜ್ಯ ಸರ್ಕಾರದಿಂದ ಅನುಮೋದನೆ ನೀಡಲಾಗಿದೆ.
ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ನಿರ್ವಹಿಸಲಾಗುವುದು. ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು ಸೇರಿದಂತೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರನ್ನು ಬಳಕೆ ಮಾಡಿಕೊಂಡು ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹುದ್ದೆಗಳನ್ನು ಮುಂದುವರೆಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ ಎಂದು ಹೇಳಲಾಗಿದೆ.

