ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ರಸಗೊಬ್ಬರ ಸಬ್ಸಿಡಿಗೆ ಅನುಮೋದನೆ

ನವದೆಹಲಿ: ಈ ವರ್ಷದ ಅಕ್ಟೋಬರ್ 1 ರಿಂದ ಮುಂದಿನ ವರ್ಷದ ಮಾರ್ಚ್ 31 ರವರೆಗೆ ಅನ್ವಯವಾಗುವ ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳ ಮೇಲೆ 2023-24 ರ ರಾಬಿ ಋತುವಿಗಾಗಿ ಪೋಷಕಾಂಶ ಆಧಾರಿತ ಸಬ್ಸಿಡಿ(NBS) ದರಗಳನ್ನು ಸರ್ಕಾರ ಅನುಮೋದಿಸಿದೆ.

ಇಂದು ಮಧ್ಯಾಹ್ನ ನಡೆದ ಸಂಪುಟ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್, ಪ್ರತಿ ಕಿಲೋಗೆ ಸಾರಜನಕಕ್ಕೆ 47.02 ರೂಪಾಯಿ, ರಂಜಕಕ್ಕೆ 20.82 ರೂಪಾಯಿ ಮತ್ತು ಪೊಟ್ಯಾಷ್‌ಗೆ 2.38 ರೂಪಾಯಿ ಪೋಷಕಾಂಶ ಆಧಾರಿತ ಸಬ್ಸಿಡಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಪೋಷಕಾಂಶ ಆಧಾರಿತ ಸಬ್ಸಿಡಿಗೆ 22,303 ಕೋಟಿ ರೂಪಾಯಿ ವೆಚ್ಚ ನಿರೀಕ್ಷಿಸಲಾಗಿದೆ.  ಈ ಕ್ರಮವು ರೈತರಿಗೆ ಸಬ್ಸಿಡಿ, ಕೈಗೆಟುಕುವ ಮತ್ತು ಸಮಂಜಸವಾದ ಬೆಲೆಯಲ್ಲಿ ರಸಗೊಬ್ಬರಗಳ ಲಭ್ಯತೆಗೆ ಕಾರಣವಾಗುತ್ತದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read