ಬೆಂಗಳೂರು: ರಾಜ್ಯದ ವಿವಿಧ ಆಸ್ಪತ್ರೆಗಳ ಕ್ರಿಟಿಕಲ್ ಕೇರ್ ಬ್ಲಾಕ್ ಗೆ 72 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ.
ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್(ಪಿಎಂ ಅಭಿಮ್) ಯೋಜನೆಯಡಿ ದಕ್ಷಿಣ ಕನ್ನಡ(ವೆನ್ಲಾಕ್), ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗಳ ಕ್ರಿಟಿಕಲ್ ಕೇರ್ ಬ್ಲಾಕ್(ಸಿಸಿಬಿ)ಗೆ ಅವಶ್ಯವಿರುವ ವಿವಿಧ ವೃಂದದ 72 ಹುದ್ದೆಗಳಿಗೆ ಆರೋಗ್ಯ ಇಲಾಖೆ ಮಂಜೂರಾತಿ ನೀಡಿದೆ.
ವೆನ್ಲಾಕ್ ಆಸ್ಪತ್ರೆಯ ಕ್ರಿಟಿಕಲ್ ಕೇರ್ ಬ್ಲಾಕ್ ಗೆ 30, ಬಾಗಲಕೋಟೆಗೆ 23, ದಾವಣಗೆರೆಗೆ 30 ಮಂದಿ ಸೇರಿದಂತೆ ಒಟ್ಟು 83 ಹುದ್ದೆ ನೇಮಕಾತಿ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಮೂರು ಮಂದಿ ಶಸ್ತ್ರಚಿಕಿತ್ಸಕರು, ಮೂವರು ಫಿಸಿಷಿಯನ್, ಮೂವರು ಅರವಳಿಕೆ ತಜ್ಞರು, 36 ಮಂದಿ ಶುಶ್ರೂಷಕರು, 27 ಮಂದಿ ಡಿ ಗ್ರೂಪ್ ಸಿಬ್ಬಂದಿ ಸೇರಿ 72 ವಿವಿಧ ವೃಂದದ ಹುದ್ದೆಗಳ ಸೃಜಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

