ಕುಂಭಮೇಳದಲ್ಲಿ ಮೃತಪಟ್ಟ ರಾಜ್ಯದ ನಾಲ್ವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳದಲ್ಲಿ ಕಾಲ್ತುಳಿತದಿಂದ ಮೃತಪಟ್ಟ ಬೆಳಗಾವಿಯ ನಾಲ್ವರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾ ಕುಂಭಮೇಳ ದುರಂತದಲ್ಲಿ ಬೆಳಗಾವಿಯ ಮೇಘಾ ದೀಪಕ್ ಹತ್ತರವರ್, ಅವರ ಜ್ಯೋತಿ ಹತ್ತರವರ್, ಅರುಣ ಕೋಪರ್ಡೆ, ಮಹದೇವಿ ಹಣಮಂತ ಬಾವಣೂರ ಮೃತಪಟ್ಟಿದ್ದಾರೆ. ಅವರ ಮೃತದೇಹಗಳನ್ನು ಏರ್ ಲಿಫ್ಟ್ ಮಾಡಲಾಗಿತ್ತು. ದೆಹಲಿಯಿಂದ ಬೆಳಗಾವಿಗೆ ತರುವವರೆಗಿನ ಎಲ್ಲಾ ಖರ್ಚನ್ನು ಸರ್ಕಾರವೇ ಭರಿಸಿದೆ. ಇದರೊಂದಿಗೆ ಮೃತರ ಕುಟುಂಬದವರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಕುಂಭಮೇಳಕ್ಕೆ ತೆರಳಿದ ರಾಜ್ಯದವರಿಗೆ ಎಲ್ಲಾ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಕಂದಾಯ ಇಲಾಖೆ ಆರಂಭಿಸಿದ ಸಹಾಯವಾಣಿಗೆ ಕರೆಗಳು ಬರುತ್ತವೆ. ರಾಜ್ಯದ ಐಎಎಸ್ ಅಧಿಕಾರಿ ಹರ್ಷಲ್ ಬೋಯಲ್ ಅವರು ಕುಂಭಮೇಳಕ್ಕೆ ತೆರಳಿ ಅಲ್ಲಿನ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡಿ ರಾಜ್ಯದವರನ್ನು ಪತ್ತೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read