HomeKarnatakaಸಾರಿಗೆ ಬಸ್ ಗಳ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ: ಅಧ್ಯಯನಕ್ಕೆ ಸಮಿತಿ ರಚನೆ

ಸಾರಿಗೆ ಬಸ್ ಗಳ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ: ಅಧ್ಯಯನಕ್ಕೆ ಸಮಿತಿ ರಚನೆ

ಬೆಂಗಳೂರು: ಡೀಸೆಲ್ ಬೆಲೆ ಏರಿಕೆ, ಸಿಬ್ಬಂದಿ ವೇತನ ಹೆಚ್ಚಳ ಸೇರಿ ವಿವಿಧ ಕಾರಣಗಳಿಂದ ಸಂಕಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್ ಗಳ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ತಜ್ಞರ ಸಮಿತಿ ರಚಿಸುವ ಸಾಧ್ಯತೆ ಇದೆ.

ರಾಜ್ಯದ 4 ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ಸುಧಾರಿಸುವ ಉದ್ದೇಶದಿಂದ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿದ್ದು, ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿಯೂ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಇದೀಗ ಪ್ರಯಾಣ ದರ ಏರಿಕೆ ಸಂಬಂಧಪಟ್ಟಂತೆ ಅಧ್ಯಯನ ನಡೆಸಿ ವರದಿ ಪಡೆಯಲು ತಜ್ಞರ ಸಮಿತಿ ನೇಮಕ ಮಾಡುವ ಬಗ್ಗೆ ಈ ಹಿಂದೆ ಹೊರಡಿಸಿದ್ದ ಆದೇಶ ಜಾರಿ ಮಾಡಲು ಸರ್ಕಾರ ಮುಂದಾಗಿದೆ.

4 ನಿಗಮಗಳಿಂದ ಸಾರಿಗೆ ಬಸ್ ಗಳ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಪಡೆದುಕೊಂಡು ನಿಗಮಗಳ ಆರ್ಥಿಕ ಪರಿಸ್ಥಿತಿ ಪರಿಶೀಲಿಸಿ ಎಷ್ಟು ಪ್ರಮಾಣದಲ್ಲಿ ಪ್ರಯಾಣ ದರ ಹೆಚ್ಚಳ ಮಾಡಬಹುದು ಎಂಬುದನ್ನು ತಿಳಿಸಲು ನಿವೃತ್ತ ಐಎಎಸ್ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದಲ್ಲಿ ಸಾರಿಗೆ ಇಲಾಖೆಯಿಂದ ಸಮಿತಿ ರಚಿಸಲಾಗುವುದು. ಈ ಸಮಿತಿ ನೀಡುವ ವರದಿ ಆಧರಿಸಿ ಜನರಿಗೆ ಹೊರೆಯಾಗದಂತೆ ಬಸ್ ಪ್ರಯಾಣ ದರ ಹೆಚ್ಚಳ ಮಾಡಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular