ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 6, 2026) ಮಂಡಿಸಿದ 2026-27ನೇಸಾಲಿನರಾಜ್ಯಬಜೆಟ್‌ನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಅತ್ಯಂತ ಪ್ರಮುಖವಾದ ಬದಲಾವಣೆಯನ್ನು ಘೋಷಿಸಿದ್ದಾರೆ. ಸುಮಾರು ಮೂರು ದಶಕಗಳ ಬಳಿಕ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ‘ಕ್ಯಾಂಪಸ್ ಪಾಲಿಟಿಕ್ಸ್’ ಮರಳಲು ವೇದಿಕೆ ಸಿದ್ಧವಾಗಿದೆ.
ವಿದ್ಯಾರ್ಥಿಸಂಘಗಳ ಚುನಾವಣೆ ಪುನಾರಂಭ
ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳು, ಜವಾಬ್ದಾರಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಸರ್ಕಾರಿ ಕಾಲೇಜುಗಳು ಮತ್ತುವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆಯನ್ನು ಪುನಃ ನಡೆಸಲು ಸರ್ಕಾರ ನಿರ್ಧರಿಸಿದೆ.
ಬಜೆಟ್‌ನ ಇತರ ಪ್ರಮುಖ ಶೈಕ್ಷಣಿಕ ಘೋಷಣೆಗಳು
- ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್: ಉನ್ನತ ವ್ಯಾಸಂಗ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗಾಗಿ ನಗರಗಳಿಗೆ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಧಾರವಾಡದಲ್ಲಿ 4 ಮತ್ತು ಬೆಂಗಳೂರಿನಲ್ಲಿ 2 ಹೊಸ ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು.
- ಸಾಮಾಜಿಕ ಜಾಲತಾಣ ನಿಷೇಧ: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ (Social Media) ಬಳಕೆಯನ್ನು ನಿಷೇಧಿಸುವ ಕಟ್ಟುನಿಟ್ಟಿನ ನಿಯಮ ಜಾರಿಗೆ ತರಲು ನಿರ್ಧರಿಸಲಾಗಿದೆ.
ಕರ್ನಾಟಕದ ರಾಜಕೀಯ ಮತ್ತು ಆರ್ಥಿಕ ಇತಿಹಾಸದಲ್ಲಿ ಒಂದು ಐತಿಹಾಸಿಕ ದಿನ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಮಂಡಿಸುತ್ತಿದ್ದು, ಇದು ಅವರ ವೈಯಕ್ತಿಕ 17ನೇ ಬಜೆಟ್ ಎಂಬುದು ವಿಶೇಷ. ಈ ಮೂಲಕ ಅವರು ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ರಾಜ್ಯದ ಮೊದಲ ಹಣಕಾಸು ಸಚಿವ ಎಂಬ ದಾಖಲೆ ಬರೆಯಲಿದ್ದಾರೆ.
.

