HomeLatest Newsಸಂಜೆ ನಂತರವೇ ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟೀಸ್: ಇಲ್ಲದಿದ್ದಲ್ಲಿ ವೇತನ ಕಡಿತ ಎಚ್ಚರಿಕೆ

ಸಂಜೆ ನಂತರವೇ ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟೀಸ್: ಇಲ್ಲದಿದ್ದಲ್ಲಿ ವೇತನ ಕಡಿತ ಎಚ್ಚರಿಕೆ

ಹುಬ್ಬಳ್ಳಿ: ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿನ ವೈದ್ಯರು, ಪ್ರಾಧ್ಯಾಪಕರು ಸಂಜೆ 4 ಗಂಟೆಯಿಂದ ಮಾತ್ರ ಖಾಸಗಿ ಪ್ರಾಕ್ಟೀಸ್ ಮಾಡಬೇಕು. ಒಂದು ವೇಳೆ ಈ ಸಮಯದಲ್ಲಿ ವೈದ್ಯರು ಆಸ್ಪತ್ರೆಗಳಲ್ಲಿ ಇಲ್ಲದಿದ್ದರೆ ಅವರ ವೇತನ ಕಡಿತಕ್ಕೆ ಕ್ರಮ ವಹಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಬಯೋಮೆಟ್ರಿಕ್ ಆಧರಿಸಿ ವೇತನ ಪಾವತಿಗೆ ಸೂಚಿಸಲಾಗಿದೆ. ವೈದ್ಯರು ತಡವಾಗಿ ಕರ್ತವ್ಯಕ್ಕೆ ಹಾಜರಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಆಸ್ಪತ್ರೆಗಳಲ್ಲಿ ಔಷಧ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯವಿರುವ ಔಷಧಗಳ ಖರೀದಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಸರ್ಕಾರ ಆದೇಶಕ್ಕೆ ಕಾಯುವ ಅಗತ್ಯವಿಲ್ಲ. ಔಷಧ ಖರೀದಿಗೆ ರೋಗಿಗಳನ್ನು ಖಾಸಗಿ ಔಷಧ ಅಂಗಡಿಗಳಿಗೆ ಕಳುಹಿಸಬಾರದು. ಯಾವುದೇ ಕಾರಣಕ್ಕೂ ಚೀಟಿ ಬರೆದು ಕೊಡಬಾರದು ಎಂದು ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular