ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಹುಲಿ ‘ದತ್ತು’

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಹುಲಿ ಒಂದನ್ನು ದತ್ತು ತೆಗೆದುಕೊಳ್ಳಲಾಗಿದೆ. ಸೋಮವಾರದಂದು ಅರಣ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ.

ಶಿವಮೊಗ್ಗದ ಹುಲಿ – ಸಿಂಹಧಾಮಕ್ಕೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಾಗೂ ಪದಾಧಿಕಾರಿಗಳು ಭೇಟಿ ನೀಡಿದ್ದು, ಈ ವೇಳೆ ಹುಲಿಯನ್ನು ಒಂದು ವರ್ಷದ ಅವಧಿಗೆ ದತ್ತು ಪಡೆಯಲಾಯಿತು.

ಮೃಗಾಲಯ ಪ್ರಾಧಿಕಾರವು ಇದಕ್ಕಾಗಿ ಎರಡು ಲಕ್ಷ ರೂಪಾಯಿಗಳನ್ನು ನಿಗದಿಪಡಿಸಿದ್ದು, ಇದನ್ನು ಪಾವತಿಸುವುದಾಗಿ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read