ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು ಕರ್ನಾಟಕ ಬಜೆಟ್ 2026 ಮಂಡನೆ ಮಾಡಲಿದ್ದಾರೆ. ಬಜೆಟ್ ಅಧಿವೇಶನ ಪ್ರಾರಂಭಕ್ಕೂ ಮೊದಲು ಸರ್ಕಾರಿ ನೌಕರರು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿತು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿತು.
ಈ ನಿಯೋಗದಲ್ಲಿ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಲ್. ಭೈರಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಗೌರವ್ಯಾಧ್ಯಕ್ಷ ಎಸ್.ಬಸವರಾಜ್, ಉಪಾಧ್ಯಕ್ಷ ಸೋಮಶೇಖರ್ ಮುಂತಾದವರಿದ್ದರು.
ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸುವ ಬಜೆಟ್‌ನಲ್ಲಿ ಈ ಕೆಳಕಂಡ ರಾಜ್ಯದ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಮನವಿ ಸಲ್ಲಿಸಲಾಗಿದೆ.
ಸರ್ಕಾರಿ ನೌಕರರ ಮನವಿಗಳು
- NPS ರದ್ದುಗೊಳಿಸಿ OPS ಜಾರಿಗೊಳಿಸುವುದು
- ಮಿಲಿಟರಿ ಕ್ಯಾಂಟೀನ್ ಮಾದರಿಯಲ್ಲಿ ಸರ್ಕಾರಿ ನೌಕರರು/ ನಿವೃತ್ತ ನೌಕರರು ಹಾಗೂ ಇತರೆ ಸಂಸ್ಥೆಗಳ ನೌಕರರು ಹಾಗೂ ಕುಟುಂಬದವರಿಗೆ MSIL ಸಂಸ್ಥೆಯ ಮೂಲಕ ಪ್ರತಿ ಜಿಲ್ಲೆಗಳಲ್ಲಿ ನೌಕರರ ಕ್ಯಾಂಟೀನ್ ಪ್ರಾರಂಭಿಸುವುದು.
- ಸರ್ಕಾರಿ ನೌಕರರ ಕರ್ತವ್ಯದ ವೇಳೆಯಲ್ಲಿ ಸಾರ್ವಜನಿಕರಿಂದ ನಡೆಯುವ ಹಲ್ಲೆ, ದೌರ್ಜನ್ಯ, ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಕಿರುಕುಳ ನೀಡುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.
- ಮನವಿ ಆಲಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ.

