HomeLatest NewsGood News: ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ, ಮಹತ್ವದ ಆದೇಶ

Good News: ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ, ಮಹತ್ವದ ಆದೇಶ

ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. 2026ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯತಗೊಳಿಸುವ ಬಗ್ಗೆ ಆದೇಶವನ್ನು ಹೊರಡಿಸಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಅಜಯ್ ಎಸ್. ಕೊರಡೆ ಸರ್ಕಾರದ ಅಧೀನ ಕಾರ್ಯದರ್ಶಿ ಆರ್ಥಿಕ ಇಲಾಖೆ (ಸೇವೆಗಳು-1) ಆದೇಶವನ್ನು ಹೊರಡಿಸಿದ್ದಾರೆ.

ಮೇಲೆ ಓದಲಾದ ದಿನಾಂಕ: 17.1.2025ರ ಸರ್ಕಾರಿ ಆದೇಶದಲ್ಲಿ 2025ನೇ ಸಾಲಿನ ಬ್ಲಾಕ್ ಅವಧಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i)ರನ್ವಯ ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದರಿ ಬ್ಲಾಕ್ ಅವಧಿಯು ದಿನಾಂಕ:31.12.2025 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2026 ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನಗಳ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ನಗದೀಕರಣ ಪಡೆಯುವ ಅವಕಾಶವನ್ನು ಸರ್ಕಾರಿ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಅಧೀನದ ಎಲ್ಲಾ ಸಂಸ್ಥೆಗಳ/ ಉದ್ಯಮಗಳ ನೌಕರರಿಗೂ ಸಂಬಂಧಿಸಿದ ಸಂಸ್ಥೆ/ ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ನಿಯತಗೊಳಿಸಲು ಅವಕಾಶವನ್ನು ಕಲ್ಪಿಸಲು ತೀರ್ಮಾನಿಸಿದೆ.

ಸರ್ಕಾರದ ಆದೇಶ: 2026 ನೇ ಸಾಲಿನ ಬ್ಲಾಕ್ ಅವಧಿಗೆ ಎಲ್ಲಾ ವೃಂದದ ರಾಜ್ಯ ಸರ್ಕಾರಿ ಅಧಿಕಾರಿ/ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ/ ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i)ರನ್ವಯ ಗರಿಷ್ಟ 15 ದಿನಗಳಿಗೆ ಮೀರದಂತೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನಗದೀಕರಣ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಿದೆ.

ಈ ಸೌಲಭ್ಯವು ದಿನಾಂಕ:1.1.2026 ರಿಂದ 31.12.2026ರ ಅವಧಿಯವರೆಗೆ ಜಾರಿಯಲ್ಲಿರುತ್ತದೆ. ಈ ಸೌಲಭ್ಯವನ್ನು ಎಲ್ಲಾ ವೃಂದದ ಅರ್ಹ ಸರ್ಕಾರಿ ಅಧಿಕಾರಿ/ ನೌಕರರು ಒಂದು ತಿಂಗಳ ಮುಂಚಿತವಾಗಿ ಮನವಿ ನೀಡಿ ಅವರ ಇಚ್ಛೆಯ ಯಾವುದೇ ತಿಂಗಳಿನಲ್ಲಿ 15 ದಿನಗಳ ಗಳಿಕೆ ರಜೆ ನಗದೀಕರಣ ಸೌಲಭ್ಯ ಪಡೆಯಬಹುದಾಗಿದೆ.

ಗಳಿಕೆ ರಜೆ ನಗದೀಕರಣಕ್ಕೆ ಮಂಜೂರಾತಿ ನೀಡುವ ಆದೇಶವನ್ನು ಯಾವುದಾದರೂ ಕಾರಣದಿಂದ ನಿಗದಿತ ಬ್ಲಾಕ್ ಅವಧಿಯಲ್ಲಿ ಹೊರಡಿಸಲು ಸಾಧ್ಯವಾಗದಿದ್ದರೆ ಸಂಬಂಧಿತ ಪ್ರಾಧಿಕಾರವು ಅಂತಹ ಆದೇಶವನ್ನು ಬ್ಲಾಕ್ ಅವಧಿ ಮುಕ್ತಾಯಗೊಂಡ ನಂತರವೂ ಹೊರಡಿಸಬಹುದು.

ಆದರೆ, ಗಳಿಕೆ ರಜೆ ನಗದೀಕರಣದ ಆರ್ಥಿಕ ಪ್ರಯೋಜನವನ್ನು ಸಂಬಂಧಿತ ಆರ್ಥಿಕ ವರ್ಷವು ಅಂತ್ಯಗೊಳ್ಳುವ ಮುನ್ನ ಪಡೆಯತಕ್ಕದ್ದು. ಗೆಜೆಟೆಡ್ ಅಧಿಕಾರಿಗಳ ಗಳಿಕೆ ರಜೆ ನಗದೀಕರಣಕ್ಕೆ ಸಂಬಂಧಿಸಿದಂತೆ, 2026ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ ಹೆಚ್‌ಆರ್‌ಎಂಎಸ್‌ನಲ್ಲಿ ಲಭ್ಯವಿರುವಂತೆ ಅಧಿಕಾರಿಗಳ ಗಳಿಕೆ ರಜೆ ಲೆಕ್ಕಾಚಾರದ ಆಧಾರದ ಮೇಲೆ ನಗದೀಕರಣವನ್ನು ಮಂಜೂರು ಮಾಡಲು ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮವಹಿಸತಕ್ಕದ್ದು ಮತ್ತು ಮಹಾಲೇಖಪಾಲರು ಲೆಕ್ಕಾಚಾರದ ಬಗ್ಗೆ ಯಾವುದೇ ವ್ಯತ್ಯಾಸವನ್ನು ತಿಳಿಸಿದಲ್ಲಿ ಅದನ್ನು ಸರಿಪಡಿಸುವ ಮತ್ತು ಅದರನ್ವಯದ ಆರ್ಥಿಕ ಸೌಲಭ್ಯಗಳಿಗೆ ಮಾತ್ರ ಅರ್ಹವಾಗುವ ಷರತ್ತಿಗೊಳಪಡಿಸಿ ಮಂಜೂರು ಮಾಡತಕ್ಕದ್ದು ಎಂದು ಆದೇಶ ಹೇಳಿದೆ.

ಮುಂದುವರೆದು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ 118 ರಲ್ಲಿ ನಿಗದಿಪಡಿಸಿರುವ ಗಳಿಕೆ ರಜೆ ನಗದೀಕರಣ ನಿಯಂತ್ರಣಕ್ಕೆ ಸಂಬಂಧಿಸಿದ ಇತರೆ ಷರತ್ತುಗಳು ಅನ್ವಯವಾಗುತ್ತವೆ ಎಂದು ಆದೇಶ ಸ್ಪಷ್ಟಪಡಿಸಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular