HomeKarnatakaವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇಂದು ವೇತನ ಆಯೋಗ ವರದಿ ಸಲ್ಲಿಕೆ

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಇಂದು ವೇತನ ಆಯೋಗ ವರದಿ ಸಲ್ಲಿಕೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾಗಿರುವ 7ನೇ ವೇತನ ಆಯೋಗದ ವರದಿಯನ್ನು ಶನಿವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು.

ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ 7ನೇ ವೇತನ ಆಯೋಗ ವರದಿಯನ್ನು ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುತ್ತದೆ. ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಗೆ ಕ್ಷಣಗಣನೆ ಶುರುವಾಗಿರುವ ಸಂದರ್ಭದಲ್ಲೇ ವೇತನ ಆಯೋಗ ವರದಿ ಸಲ್ಲಿಕೆ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶನಿವಾರ ಬೆಳಗ್ಗೆ 10 ಗಂಟೆಗೆ ಕಾವೇರಿ ನಿವಾಸದಲ್ಲಿ ಭೇಟಿ ಮಾಡಲಿರುವ ನಿಯೋಗ ವರದಿ ಸಲ್ಲಿಸಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular