HomeKarnatakaವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಆಯೋಗ ವರದಿ ಸಲ್ಲಿಸಲು ಅಧ್ಯಕ್ಷರಿಗೆ ನಿಯೋಗ...

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಆಯೋಗ ವರದಿ ಸಲ್ಲಿಸಲು ಅಧ್ಯಕ್ಷರಿಗೆ ನಿಯೋಗ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ನೌಕರರ ಸಂಘದ ನಿಯೋಗ 7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ ರಾವ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಶೀಘ್ರವೇ ವರದಿ ಸಲ್ಲಿಸುವಂತೆ ನೌಕರರ ಸಂಘದ ನಿಯೋಗದಿಂದ ಮನವಿ ಮಾಡಲಾಗಿದೆ. ಏಳನೇ ವೇತನ ಆಯೋಗ ರಚನೆಯಾಗಿ 14 ತಿಂಗಳು ಕಳೆದಿದ್ದು, ವರದಿ ಸಲ್ಲಿಕೆ ವಿಳಂಬವಾಗಿದೆ. ವೇತನ ಆಯೋಗದ ಅನುಷ್ಠಾನದ ಬಗ್ಗೆ ನೌಕರರಲ್ಲಿಯೂ ಆತಂಕ ಇದೆ. ಮಾರ್ಚ್ ನಲ್ಲಿ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ತಡ ಮಾಡದೆ ವರದಿ ನೀಡಬೇಕು ಎಂದು ನೌಕರರ ನಿಯೋಗ ಒತ್ತಾಯಿಸಿದೆ.

ವೇತನ ಆಯೋಗದ ಅಧ್ಯಕ್ಷ ಸುಧಾಕರ ರಾವ್ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಈ ಸಂದರ್ಭದಲ್ಲಿ ಆಯೋಗದ ಸದಸ್ಯರಾದ ರಾಮಮೂರ್ತಿ, ಶ್ರೀಕಾಂತ ವನವಳ್ಳಿ, ಸದಸ್ಯ ಕಾರ್ಯದರ್ಶಿ ಹೆಬ್ಸಿಬಾ ರಾಣಿ ಇದ್ದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮತ್ತು ಪದಾಧಿಕಾರಿಗಳು ನಿಯೋಗದಲ್ಲಿ ತೆರಳಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular