HomeKarnatakaGood News: ಡಯಾಲಿಸಿಸ್‌ಗೆ ಒಳಗಾಗುವ ಸರ್ಕಾರಿ ನೌಕರರಿಗೆ ವಿಶೇಷ ರಜೆ, ವಿಶ್ರಾಂತಿ

Good News: ಡಯಾಲಿಸಿಸ್‌ಗೆ ಒಳಗಾಗುವ ಸರ್ಕಾರಿ ನೌಕರರಿಗೆ ವಿಶೇಷ ರಜೆ, ವಿಶ್ರಾಂತಿ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಡಯಾಲಿಸಿಸ್‌ಗೆ ಒಳಗಾಗುವ ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವ 6 ತಿಂಗಳ ವಿಶೇಷ ಸಾಂದರ್ಭಿಕ ರಜೆ ಅವಧಿಯಲ್ಲಿ ಮೂತ್ರಪಿಂಡ ಕಸಿ (Kidny Transplantation) ಚಿಕಿತ್ಸೆಗೆ ಒಳಗಾಗಿ ವೈದ್ಯರು ಸೂಚಿಸುವ ದಿನಗಳಷ್ಟು ವಿಶ್ರಾಂತಿ ಪಡೆಯಲು ಅವಕಾಶ ಕಲ್ಪಿಸಿ ಸೂಕ್ತ ಆದೇಶ ಹೊರಡಿಸುವ ಬಗ್ಗೆ ಮನವಿ ಮಾಡಿದೆ.

ಈ ಕುರಿತು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು, ಮಾನ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ ಇವರಿಗೆ ಪತ್ರವನ್ನು ಬರೆದಿದ್ದಾರೆ.

ಮನವಿಯ ವಿವರಗಳು: ಈ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಸ್ಪಂದಿಸಿ ಸರ್ಕಾರವು ಡಯಾಲಿಸಿಸ್‌ಗೆ ಒಳಗಾಗುವ ರಾಜ್ಯ ಸರ್ಕಾರಿ ನೌಕರರಿಗೆ ಚಿಕಿತ್ಸೆ ಪಡೆಯುವ ದಿನದಂದು ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸುವ ಷರತ್ತಿಗೊಳಪಟ್ಟು 6 ತಿಂಗಳವರೆಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂತೆಯೇ, ಮೂತ್ರಪಿಂಡ ಕಸಿ ಚಿಕಿತ್ಸೆಗೆ (Kidny Transplantation) ಒಳಗಾಗುವ ರಾಜ್ಯ ಸರ್ಕಾರಿ ನೌಕರರಿಗೂ ಸಹ ವಿಶೇಷ ಸಾಂದರ್ಭಿಕ ರಜೆಯ ಅವಶ್ಯಕತೆ ಇದ್ದು, ಸರ್ಕಾರವು ಡಯಾಲಿಸಿಸ್‌ಗೆ ಒಳಗಾಗುವ ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವ 6 ತಿಂಗಳ ವಿಶೇಷ ಸಾಂದರ್ಭಿಕ ರಜೆ ಮಾದರಿಯಲ್ಲೇ ಮೂತ್ರಪಿಂಡ ಕಸಿ ಚಿಕಿತ್ಸೆಗೆ ಒಳಗಾಗುವ ನೌಕರರಿಗೆ ಚಿಕಿತ್ಸೆ ಹಾಗೂ ವೈದ್ಯರು ಸೂಚಿಸುವ ದಿನಗಳಷ್ಟು ವಿಶ್ರಾಂತಿ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿಸುವಂತೆ ಸಂಘಕ್ಕೆ ಮನವಿಗಳು ಸಲ್ಲಿಕೆಯಾಗಿರುತ್ತವೆ.

ಮೇಲಿನ ಅಂಶಗಳ ಹಿನ್ನೆಲೆಯಲ್ಲಿ ಮೂತ್ರಪಿಂಡ ಕಸಿ ಚಿಕಿತ್ಸೆಗೆ ಒಳಗಾಗುವ ಪ್ರಕರಣಗಳು ವಿರಳವಾಗಿದ್ದು, ಡಯಾಲಿಸಿಸ್‌ಗೆ ಒಳಗಾಗುವ ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವ ಆರು ತಿಂಗಳ ವಿಶೇಷ ಸಾಂದರ್ಭಿಕ ರಜೆ ಅವಧಿಯಲ್ಲಿಯೇ ಮೂತ್ರಪಿಂಡ ಕಸಿ ಚಿಕಿತ್ಸೆಗೆ (Kidny Transplantation) ಹಾಗೂ ಚಿಕಿತ್ಸೆಯ ನಂತರ ವೈದ್ಯರು ಸೂಚಿಸುವ ದಿನಗಳಷ್ಟು ವಿಶ್ರಾಂತಿ ಪಡೆಯಲು ಅನುಕೂಲವಾಗುವಂತೆ ಮೇಲಿನ ಅಂಶವನ್ನು ಸೇರಿಸಿ ಸೂಕ್ತ ಆದೇಶ ಹೊರಡಿಸಲು ತಮ್ಮಲ್ಲಿ ಕೋರಿದೆ ಎಂದು ಮನವಿ ಮಾಡಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular