ಸರ್ಕಾರಿ ನೌಕರರ ಸಂಘದಲ್ಲಿ ಅವ್ಯವಹಾರ, ಹಣ ದುರ್ಬಳಕೆ, ವಂಚನೆ, ಕಾನೂನು ಬಾಹಿರ ಚಟುವಟಿಕೆ ಆರೋಪ: ತನಿಖೆಗೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಅಕ್ರಮ ನಡೆದಿರುವ ಕುರಿತಾಗಿ ಬಂದಿರುವ ದೂರುಗಳ ಬಗ್ಗೆ ತನಿಖೆ ನಡೆಸಿ ಕ್ರಮಕ್ಕೆ ವರದಿ ನೀಡುವಂತೆ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲೆ ಸಹಕಾರ ಉಪನಿಬಂಧಕರಿಗೆ ಸೂಚನೆ ನೀಡಿದ್ದಾರೆ.

ಸರ್ಕಾರಿ ನೌಕರರ ಸಂಘದಲ್ಲಿ ಅವ್ಯವಹಾರ, ಹಣ ದುರುಪಯೋಗ, ವಂಚನೆ, ಕಾನೂನು ಬಾಹಿರ ಚಟುವಟಿಕೆಗಳು ನಡೆದಿವೆ ಎಂದು ಶಾಂತರಾಮ ಮತ್ತು ಇತರರು ದಾಖಲೆ ಸಹಿತ ಆರೋಪಿಸಿದ್ದಾರೆ. ಬೇರೆ ಬೇರೆ ಜಿಲ್ಲಾ ನೋಂದಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಸಂಘದ ಅಧ್ಯಕ್ಷರನ್ನು ವಜಾಗೊಳಿಸಿ ಆಡಳಿತ ಅಧಿಕಾರಿ ನೇಮಕ ಮಾಡಬೇಕು. ರಾಜ್ಯಾಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದ್ದು, ಈ ಆರೋಪಗಳ ಬಗ್ಗೆ ತನಿಖೆ ನಡೆಸಿ ಆರೋಪ ಸಾಬೀತಾದಲ್ಲಿ ಸೂಕ್ತ ಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಬೆಂಗಳೂರು ನಗರ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕರಿಗೆ ಸೂಚನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read