HomeKarnatakaಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸದಸ್ಯತ್ವ ಅಮಾನತು

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸದಸ್ಯತ್ವ ಅಮಾನತು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ಸದಸ್ಯತ್ವ ಅಮಾನತ್ತಿನಲ್ಲಿಡುವ ಬಗ್ಗೆ ಬೈಲಾ ರೀತಿಯಲ್ಲಿ ಕ್ರಮ ಕೈಗೊಂಡು ವರದಿ ನೀಡಲು ಸಹಕಾರ ಸಂಘಗಳ ಉಪನಿಬಂಧಕರ ಜಿಲ್ಲಾ ನೋಂದಣಾಧಿಕಾರಿಗಳು ನೌಕರರ ಸಂಘದ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ರಾಜ್ಯ ಪರಿಷತ್ ಸದಸ್ಯ ಬಿ. ಗಂಗಾಧರ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಸಹಕಾರ ಸಂಘಗಳ ಉಪನಿಬಂಧಕರು ಈ ಕ್ರಮ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಷಡಾಕ್ಷರಿ ಅವರನ್ನು ಕೋಲಾರದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಮುಂದೆ ಕರ್ತವ್ಯಕ್ಕೆ ಹಾಜರಾಗುವವರೆಗೆ ಅವರ ಸದಸ್ಯತ್ವವನ್ನು ಅಮಾನತ್ತಿನಲ್ಲಿಡಬೇಕು ಎಂದು ಬಿ. ಗಂಗಾಧರ ಮನವಿ ಮಾಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular