1000 ಗ್ರಾಮ ಆಡಳಿತಾಧಿಕಾರಿಗಳು, 750 ಸರ್ಕಾರಿ ಸರ್ವೆಯರ್, 35 ಎಡಿಎಲ್ಆರ್ ಗಳ ನೇಮಕಾತಿ

ಬೆಂಗಳೂರು: ಸರ್ವೆ ಇಲಾಖೆಯಲ್ಲಿನ ಅನೇಕ ಸಮಸ್ಯೆಗಳಿಂದ ರೈತರು ಸಂಕಷ್ಟಕ್ಕೀಡಾಗಿರುವುದು ಸರ್ಕಾರ ಗಮನದಲ್ಲಿದೆ. ಒಂದು ಸಾವಿರ ಗ್ರಾಮ ಲೆಕ್ಕಗರು, 750 ಸರ್ವೆಯರ್ ಗಳನ್ನು ನೇಮಕ ಮಾಡುವ ಮೂಲಕ ಸಮಸ್ಯೆ ಬಗೆಹರಿಸಲು ಸರ್ಕಾರ ಪ್ರಯತ್ನಿಸಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ದುರ್ಯೋಧನ ಐಹೊಳೆ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಜನತಾ ದರ್ಶನದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ದೂರು ಬರುತ್ತಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿಗಳು, 750 ಸರ್ಕಾರಿ ಸರ್ವೆಯರ್ ಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇದರೊಂದಿಗೆ ನೂರಕ್ಕೂ ಅಧಿಕ ಪರವಾನಿಗೆ ಹೊಂದಿದ ಖಾಸಗಿ ಸರ್ವೇಯರ್ ಗಳು, 35 ಎಡಿಎಲ್ಆರ್ ಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದ್ದು, ಎಲ್ಲಾ ಹುದ್ದೆಗಳನ್ನು ಮೂರರಿಂದ ಆರು ತಿಂಗಳೊಳಗೆ ಭರ್ತಿ ಮಾಡುವಂತೆ ಕೆಪಿಎಸ್ಸಿಗೆ ಸೂಚನೆ ನೀಡಲಾಗಿದೆ. ಸರ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಯಾದಲ್ಲಿ ಬಲ ಬರಲಿದೆ. ಮತ್ತಷ್ಟು ಹುದ್ದೆಗಳನ್ನು ಸೃಷ್ಟಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read