HomeKarnatakaವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕೆಎಎಸ್ ಸೇರಿ 276 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಸರ್ಕಾರ...

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕೆಎಎಸ್ ಸೇರಿ 276 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಸರ್ಕಾರ ಸಿದ್ಧತೆ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕೆಎಎಸ್ ಸೇರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ 276 ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ.

105 ಗ್ರೂಪ್ ಎ ಹುದ್ದೆಗಳು, 171 ಗ್ರೂಪ್ ಬಿ ವೃಂದಕ್ಕೆ ಸೇರಿದ ಹುದ್ದೆಗಳು ಇವೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಖಾಲಿ ಹುದ್ದೆಗಳ ಮಾಹಿತಿಯನ್ನು ಎಲ್ಲ ಇಲಾಖೆಗಳಿಂದ ಸಂಗ್ರಹಿಸಿದ್ದು, ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತರು 41, ಆರ್.ಡಿ.ಪಿ.ಆರ್. ಕಾರ್ಯನಿರ್ವಾಹಕ ಅಧಿಕಾರಿ 20, ಕಂದಾಯ ಇಲಾಖೆ ತಹಶೀಲ್ದಾರ್(ಗ್ರೇಡ್ 2) 6, ವಾಣಿಜ್ಯ ತೆರಿಗೆ ಅಧಿಕಾರಿ 59, ಆರ್ಥಿಕ ಇಲಾಖೆ ಸಹಾಯಕ ಖಜಾನೆ ಅಧಿಕಾರಿ 23 ಸೇರಿ ವಿವಿಧ ಇಲಾಖೆಗಳ 276 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳು ಖಾಲಿ ಇವೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ ಕಾರ್ಯನಿರ್ವಾಹಕ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. 59 ಹುದ್ದೆಗಳ ಭರ್ತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular